ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ

ಔರಾದ :ಅ.೨೧: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ನಾನಾ ಕಡೆಗಳಲ್ಲಿ ರೈತರ ಜಮೀನುಗಳ ಜಾನುವಾರುಗಳಿಗೆ ಹಾನಿ ಉಂಟಾಗಿದ್ದು ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಆಗಸ್ಟ್ ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುವುದು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅತಿವೃಷ್ಟಿ , ಗೋಳಪಟ್ಟ ರೈತರಿಗೆ ಪರಿಹಾರ ಒದಗಿಸುವ ಮತ್ತು ಜಾನುವಾರುಗಳೂ ಕಳೆದುಕೊಂಡ, ರೈತರಿಗೂ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ರೈತ ಮೋರ್ಚಾ ವತಿಯಿಂದ ಮನವಿ ಪತ್ರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಕಲ್ಮುಡಪ್ಪ ಮತ್ತು ರಾಜ್ಯ ಉಪಾಧ್ಯಕ್ಷರಾದ ಶ್ರೀ ಗುರುಲಿಂಗೌಡ ಅವರ ಒಂದು ನೇತೃತ್ವದಲ್ಲಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.