
ಔರಾದ್ : ತಾಲೂಕಿನ ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗ್ರಾಮೀಣ ಪ್ರದೇಶದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬAಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತ ಕುಟುಂಬಗಳನ್ನು ಗುರುತಿಸಿ, ಅರ್ಹ ಕುಟುಂಬಗಳ ಅರ್ಜಿಗಳನ್ನು ಸ್ವೀಕರಿಸುವಂತೆ ಸೂಚಿಸಲಾಗಿದೆ.
ನಿವೇಶನ ಹೊಂದಿರದ ಅರ್ಹ ಕುಟುಂಬಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಚೇರಿಗೆ ಸೆಪ್ಟೆಂಬರ್ ೩೦ ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.
ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಸಂಬAಧಿಸಿದ ದಾಖಲೆಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅರ್ಹ ಕುಟುಂಬಗಳು ಯಾವುದೇ ಕಾರಣಕ್ಕೂ ಅವಕಾಶದಿಂದ ವಂಚಿತರಾಗದAತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಸಲ್ಲಿಸುವ ಮೂಲಕ ಅರ್ಹ ನಿವೇಶನ ರಹಿತ ಕುಟುಂಬಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಪಂ ಇಒ ಕಿರಣ ಪಾಟೀಲ್ ಮನವಿ ಮಾಡಿದ್ದಾರೆ.































