
ಬೀದರ್: ಫೆ.೨೫:ಕನ್ನಡ ಸೇನೆ ಕರ್ನಾಟಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಶ್ರೀ ಗುಂಡು ರೆಡ್ಡಿ ಗುಡಾಡಿ ಅವರನ್ನು ಜಿಲ್ಲಾ ಕಾನೂನು ಸಲಹೆಗಾರರಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಸುಭಾಷ್ ಕೆನಡೆ ತಿಳಿಸಿದ್ದಾರೆ.
ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗೆ ಸಂಘಟನೆ ಶಕ್ತಿಶಾಲಿಯಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಉಪಾಧ್ಯಕ್ಷ ಡಾ. ರವಿಸ್ವಾಮಿ ನಿರ್ಣಾ ಅವರ ಆದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ಪತ್ರಿಕಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.



























