
ಗುಬ್ಬಿ, ಏ. ೪- ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತಾಲ್ಲೂಕು ಘಟಕದ ೨೦೨೫-೨೮ ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಮತ್ತು ಪತ್ರಕರ್ತರ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಏ. ೬ ರಂದು ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ ಮಂಜುನಾಥ್ ಡಿ. ತಿಳಿಸಿದ್ದಾರೆ.
ಸಂಘದ ನೂತನ ಕಚೇರಿಯನ್ನು ಶಾಸಕ ಎಸ್.ಆರ್. ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮಾರಂಭ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ. ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಎಲ್. ಯೋಗಿಶ್ ಪ್ರಮಾಣ ವಚನ ಬೋಧಿಸಲಿದ್ದಾರೆ.
ತಾಲ್ಲೂಕು ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಅಂಜಿನಪ್ಪ ನವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿರುವರು ಎಂದು ಹೇಳಿದ್ದಾರೆ.





















