Home ಜಿಲ್ಲೆ ಬೆಂಗಳೂರು ಅರಸು ೧೧೧ನೇ ಜನ್ಮ ದಿನಾಚರಣೆ

ಅರಸು ೧೧೧ನೇ ಜನ್ಮ ದಿನಾಚರಣೆ

ಕೋಲಾರ,ಆ,೧೧-ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ ೧೧೧ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ ೨೦ ರಂದು ಕಾರ್ಯಕ್ರಮವನ್ನು ಬೆಳಿಗ್ಗೆ ೧೦.೧೫ ಗಂಟೆಗೆ ಮೆರವಣಿಗೆ ಹಾಗೂ ೧೨.೦೦ ಗಂಟೆಗೆ ಟಿ.ಚನ್ನಯ್ಯ ರಂಗಮಂದಿರ, ಹಳೇ ಬಸ್ ಸ್ಟ್ಯಾಂಡ್ ಹತ್ತಿರ, ಕೋಲಾರ ಟೌನ್, ಇಲ್ಲಿ ಸಾರ್ವಜನಿಕ ಸಮಾರಂಭವನ್ನು ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಕೋಲಾರ ಜಿಲ್ಲೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಆಚರಿಸಲಾಗುತ್ತಿದೆ.


ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿ ಗಳು, ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಗಳು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.