
ಗದಗ,ಆ೨೩: “ಕರ್ನಾಟಕ ಕಂಡ ಅಪ್ರತಿಮ ನಾಯಕ, ಹಿಂದುಳಿದ ವರ್ಗಗಳ ಏಳಿಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಮಾಜಿಕ ಕ್ರಾಂತಿಯ ಹರಿಕಾರ ದೀನದಲಿತರ ಆಶಾಕಿರಣ, ಹಿಂದುಳಿದವರ ಏಳಿಗೆಗೆ ಅರಸು ಅವರ ಕೊಡುಗೆ ರಾಜ್ಯಕ್ಕೆ ಅಪಾರ, ದಿ. ಡಿ. ದೇವರಾಜ ಅರಸು ಅವರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಸಾಮಾಜಿಕ ಸಮಾನತೆಗೆ ಭದ್ರ ಬುನಾದಿ ಹಾಕಿದವರು ಅರಸರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರುಗಳ ಸಹಯೋಗದಲ್ಲಿ ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ ನೊಂದವರ ನಂದಾದೀಪ, ಸಾಧನೆಗಳ ಸರದಾರ, ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸುರವರ ೧೧೧ ನೇ ಜನ್ಮದಿನಾಚರಣೆ ಸಮಾರಂಭ ಕಾರ್ಯಕ್ರಮ ನಗರದ ಮುಳಗುಂದ ರೋಡ್ ಕನಕ ಭವನದಲ್ಲಿ ದಿ. ಡಿ. ದೇವರಾಜ ಅರಸುರವರ ೧೧೧ ನೇ ಜನ್ಮದಿನಾಚರಣೆ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೊಸ ಚಿಗುರು – ಹಳೆ ಬೇರು” ಎಂಬ ತತ್ವದಂತೆ, ಅರಸು ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ದೂರದೃಷ್ಟಿಯಿಂದ ಶ್ರಮಿಸಿದರು.
‘ ಉಳುವವನೇ ಭೂಮಿಯ ಒಡೆಯ’ ಎಂಬ ಭೂ ಸುಧಾರಣೆ ಕಾಯ್ದೆಯನ್ನು ಅರಸು ಅವರು ಜಾರಿಗೆ ತಂದರು. ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆಯು ರಾಜ್ಯದ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲು. ಅಂದು ಬಡ ರೈತರಿಗೆ ಭೂಮಿಯ ಒಡೆತನ ಸಿಕ್ಕಿದ್ದರಿಂದ ಇಂದು ರಾಜ್ಯದ ಶೇ. ೩೦ ಕ್ಕಿಂತ ಹೆಚ್ಚು ರೈತರು ಸ್ವಂತ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಲಕ್ಷಾಂತರ ಬಡ ಕುಟುಂಬಗಳು ಜಮೀನಿನ ಒಡೆಯರಾಗುವಂತೆ ಮಾಡಿದ ಕ್ರಾಂತಿಕಾರಿ ಹೆಜ್ಜೆ ಇದಾಗಿತ್ತು ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಸವರಾಜ .ವಿ. ಬಳ್ಳಾರಿ ಮಾತನಾಡಿ ಸಾಮಾಜಿಕ ಸಮಾನತೆ, ಶೋಷಿತ ವರ್ಗಗಳ ಏಳಿಗೆ ಹಾಗೂ ಶೈಕ್ಷಣಿಕ ಪ್ರಗತಿಗೆ ತಳಪಾಯ ಹಾಕಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಕೊಡುಗೆ ಇಡೀ ಕರ್ನಾಟಕಕ್ಕೆ ಐತಿಹಾಸಿಕವಾಗಿದೆ ಎಂದು ಹೇಳಿದರು.
ಶೋಷಿತರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಸರ್ವಾಂಗೀಣ ಏಳಿಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ ನಾಯಕ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸುರವರು ಎಂದರು. ಉಳುವವನೇ ಭೂಮಿಯ ಒಡೆಯ” ಕಾಯ್ದೆಯ ಮೂಲಕ ಲಕ್ಷಾಂತರ ಬಡ ರೈತರು ಮತ್ತು ಶೋಷಿತರಿಗೆ ಭೂಮಿಯ ಹಕ್ಕು ನೀಡಿ, ಸಮಾಜದಲ್ಲಿ ನೆಮ್ಮದಿ ಹಾಗೂ ಆತ್ಮಗೌರವದಿಂದ ಬದುಕಲು ದಾರಿ ಮಾಡಿಕೊಟ್ಟರು ಎಂದು ಹೇಳಿದರು.
ಶೈಕ್ಷಣಿಕ ಮೂಲಸೌಕರ್ಯ ಹಾಗೂ ವಸತಿ ನಿಲಯಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ನೂರಾರು ವಸತಿ ನಿಲಯಗಳನ್ನು (ಹಾಸ್ಟೆಲ್) ಪ್ರಾರಂಭಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಮೂಲಕ ಹೊಸ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದರು ಎಂದರು.
ಗದಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಜಿಲ್ಲಾಡಳಿತದ ಶ್ರಮದಿಂದ ಸುಮಾರು ೪೮ಕ್ಕೂ ಹೆಚ್ಚು ವಸತಿ ನಿಲಯಗಳು, ವಸತಿ ಶಾಲೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಕಾಯುತ್ತಿವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಸವರಾಜ .ವಿ. ಬಳ್ಳಾರಿ ಹೇಳಿದರು.
ಜಿಲ್ಲಾ ಹಾಲುಮತ ಸಂಘದ ಅಧ್ಯಕ್ಷರಾದ ಫಕೀರಪ್ಪ ಹೇಬಸೂರ ಮಾತನಾಡಿ ಹಿಂದುಳಿದ ವರ್ಗಗಳ, ದಲಿತರ ಹಾಗೂ ಶೋಷಿತರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಮಹಾನ್ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಎಂದು ಹೇಳಿದರು.
ಸಾಮಾಜಿಕ ನ್ಯಾಯ ಮತ್ತು ಹೋರಾಟಕ್ಕೆ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅರಸು ಅವರು ರೂಪಿಸಿದ ಯೋಜನೆಗಳು ಹಾಗೂ ತಂದ ಭೂಸುಧಾರಣಾ ಕಾಯ್ದೆ ಬಡವರ ಆತ್ಮಗೌರವದ ಬದುಕಿಗೆ ಬಲ ನೀಡಿದೆ. ಶೋಷಿತ ಸಮುದಾಯಗಳನ್ನು ಸಂಘಟಿಸಿ ಅವರಿಗೆ ರಾಜಕೀಯ ಹಾಗೂ ಸಾಮಾಜಿಕ ಪ್ರಾತಿನಿಧ್ಯ ದೊರಕಿಸಿಕೊಟ್ಟ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು.
ಅಬ್ದುಲ್ ಕಲಾಂ ಮಾದರಿ ಯುವಜನತೆಯಲ್ಲಿ ರೂಪುಗೊಳ್ಳಲಿ ನಮ್ಮ ಮಕ್ಕಳು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ಮಹಾನ್ ವಿಜ್ಞಾನಿಗಳು, ದೇಶಪ್ರೇಮಿಗಳು ಹಾಗೂ ಸಮಾಜ ಸುಧಾರಕರಾಗಿ ಬೆಳೆಯಬೇಕು. ಶೈಕ್ಷಣಿಕವಾಗಿ ಮತ್ತು ತಾಂತ್ರಿಕವಾಗಿ ಮುನ್ನಡೆಯುವ ಮೂಲಕ ಸಮಾಜ ಹಾಗೂ ದೇಶಕ್ಕೆ ಉತ್ತಮ ಹೆಸರು ತರಬೇಕು ಎಂದು ಜಿಲ್ಲಾ ಹಾಲುಮತ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಹೇಳಿದರು.
ಈ ಕಾರ್ಯಕ್ರಮದಲ್ಲಿ ನಗರಾಭಿರುದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ.ನಂದಾ ಹಣಬರಟ್ಟಿ,ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಮಿತ ಬಿದರಿ, ರಾಜ್ಯ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರವಿ .ಎಲ್. ಗುಂಜಿಕರ, ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷ ರವಿ ದಂಡಿನ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ರಾಜ್ಯ ಹಾಲುಮತ ಸಂಘದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಪೂಜಾರ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






























