Home ಜಿಲ್ಲೆ ಕಲಬುರಗಿ ಅರ್ಜುಣಗಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನತಂಡವು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಅರ್ಜುಣಗಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನತಂಡವು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ, ಅ.28:2026ರ ಅಕ್ಟೋಬರ್ 27 ರಂದು ಜರುಗಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಫಜಲಪೂರ ತಾಲೂಕಿನ ಅರ್ಜುಣಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪದವಿ ಪೂರ್ವ ವಿಭಾಗದ ಬಾಲಕಿಯರ ವಾಲಿಬಾಲ್ ತಂಡವು ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಅವರು ತಮ್ಮ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

   ಅದೇ ರೀತಿ ಈ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಈ ವಸತಿ ಕಾಲೇಜಿನ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್, ತರಬೇತಿದಾರ ರಾಜಶೇಖರ ಕುಂಬಾರ, ಕನ್ನಡ ಭಾಷೆಯ ಉಪನ್ಯಾಸಕಿ ಪ್ರತೀಮಾ ಪಾಟೀಲ್, ವಸತಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.