Home ಜಿಲ್ಲೆ ಮತದಾನದ ಮಹತ್ವ ಸಾರಿದ ಚಿತ್ರಕಲಾ ಪ್ರದರ್ಶನ

ಮತದಾನದ ಮಹತ್ವ ಸಾರಿದ ಚಿತ್ರಕಲಾ ಪ್ರದರ್ಶನ

ಗದಗ,ಜು೫: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ೨೦೨೬ರ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಹಕ್ಕು, ಜವಾಬ್ದಾರಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ವಿಶೇಷ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, “ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಪ್ರತಿಯೊಬ್ಬ ಮತದಾರನ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಗತ್ಯ” ಎಂಬ ಸಂದೇಶವನ್ನು ಚಿತ್ರಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಹಾಗೂ ೬೫-ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆಗಿರುವ ಡಾ. ನಂದಾ ಹಣಬರಟ್ಟಿ ಅವರು ಸ್ವತಃ ರಚಿಸಿದ ಸಾಮಾಜಿಕ ಜಾಗೃತಿ ಮತ್ತು ಮತದಾನದ ಮಹತ್ವ ಸಾರುವ ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಎಸ್‌ಐಆರ್ ಪ್ರಕ್ರಿಯೆ, ಮತದಾರರ ನೋಂದಣಿ, ಮತದಾನದ ಹಕ್ಕಿನ ಮಹತ್ವ ಹಾಗೂ ಜಾಗೃತ ನಾಗರಿಕನ ಕರ್ತವ್ಯವನ್ನು ಪ್ರತಿಬಿಂಬಿಸುವ ಕಲಾಕೃತಿಗಳು ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಾರ್ವಜನಿಕರು ಹಾಗೂ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾದವು.

ಚಿತ್ರಕಲಾ ಪ್ರದರ್ಶನವನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಸಾಮಾಜಿಕ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಚಿತ್ರಕಲೆಯಂತಹ ಸೃಜನಾತ್ಮಕ ಮಾಧ್ಯಮಗಳು ಪರಿಣಾಮಕಾರಿ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಕೈಗೊಂಡಿರುವ ಈ ವಿನೂತನ ಪ್ರಯತ್ನವನ್ನು ಅವರು ಮುಕ್ತಕಂಠದಿAದ ಶ್ಲಾಘಿಸಿದರು.

ಎಸ್‌ಐಆರ್-೨೦೨೬ರ ಯಶಸ್ವಿ ಅನುಷ್ಠಾನಕ್ಕಾಗಿ ಸಾರ್ವಜನಿಕರು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಹಾಗೂ ಅಗತ್ಯ ಮಾಹಿತಿಯನ್ನು ಸಲ್ಲಿಸಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸುವಂತೆ ಅಧಿಕಾರಿಗಳು ಕರೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್., ಜಿ ಪಂ ಮುಖ್ಯ ಯೋಜನಾಧಿಕಾರಿ ಎ ಎ ಕಂಬಾಳಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿ ಪಂ ಪಿಡಿ ಎಂ ವಿ ಚಳಗೇರಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.