
ಕಲಬುರಗಿ,ನ.12-ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ ಅವರು ತಮ್ಮ ವಿರುದ್ಧ ನೀಡುತ್ತಿರುವ ಹೇಳಿಕೆಗಳು ಮತ್ತು ಮಾಡುತ್ತಿರುವ ಆರೋಪಗಳ ಬಗ್ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವೈ.ಪಾಟೀಲ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಿಗಮದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರು ಬಾರಿ ಶಾಸಕರಾಗಿರುವ ಅವರ ಸಹೋದರರಿಗೆ ನಿತೀನ್ ಗುತ್ತೇದಾರ ಅವರು ಸಾತ್ ನೀಡಿಲ್ಲ. ಇನ್ನೂ ನಾವು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಗೆ ಒಳ್ಳೆಯ ಮಾತುಗಳನ್ನಾಡುತ್ತಾರೆ ?ಎಂದು ಪ್ರಶ್ನಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅರುಣಕುಮಾರ ಪಾಟೀಲ ಅವರು, ಅದು ಅವರ ಸಂಸ್ಕøತಿಯನ್ನು ತಿಳಿಸುತ್ತದೆ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ನಿತೀನ್ ಗುತ್ತೇದಾರ ಅವರು ತಮ್ಮ ಬಗ್ಗೆ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನಿಡಿದ್ದೇನಷ್ಟೇ ಎಂದು ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಜನರ ಬೆಂಬಲ ನಮಗಿದೆ ಎಂದ ಅವರು 1994 ರಿಂದಲೂ ಈ ಎದುರಾಳಿ ಆಟ ನಡೆಯುತ್ತಿದೆ ಎಂದು ಹೇಳಿದರು.





















