Home ಜಿಲ್ಲೆ ಆಷಾಢ ಏಕಾದಶಿ: ಅಪ್ಪಾಸಾಹೇಬ್ ವಿಠ್ಠಲನ ದರ್ಶನ ಪಡೆದ ಸಾವಿರಾರು ಭಕ್ತರು

ಆಷಾಢ ಏಕಾದಶಿ: ಅಪ್ಪಾಸಾಹೇಬ್ ವಿಠ್ಠಲನ ದರ್ಶನ ಪಡೆದ ಸಾವಿರಾರು ಭಕ್ತರು

ಸಂಜೆ ವಾಣಿ ವಾರ್ತೆ
ಜಮಖಂಡಿ, ಜು. ೨೬: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಅಪ್ಪಾಸಾಹೇಬ್ ವಿಠ್ಠಲ ಮಂದಿರದಲ್ಲಿ ಆಷಾಢ ಏಕಾದಶಿ ಅಂಗವಾಗಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರೀ ವಿಠ್ಠಲ ಹಾಗೂ ರುಕ್ಮಿಣಿ ದೇವಿಯ ದರ್ಶನ ಪಡೆದು ಪುನೀತರಾದರು.

ಆಷಾಢ ಏಕಾದಶಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿಠ್ಠಲ-ರುಕ್ಮಿಣಿ ಮೂರ್ತಿಗೆ ವಿವಿಧ ಬಗೆಯ ಹೂವುಗಳಿಂದ ಮಾಡಲಾದ ಅಲಂಕಾರ ಭಕ್ತರ ಗಮನ ಸೆಳೆಯಿತು. ಸುಂದರ ಪುಷ್ಪಾಲಂಕಾರವನ್ನು ಕಂಡು ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದರು.

ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಯುವಕರು ಹಾಗೂ ಮಂದಿರ ಮಂಡಳಿಯ ಸದಸ್ಯರು ಆತ್ಮೀಯವಾಗಿ ಸ್ವಾಗತ ಕೋರಿದರು. ಭಕ್ತರಿಗೆ ಪ್ರಸಾದ ವಿತರಿಸುವುದರ ಜೊತೆಗೆ ಹಣೆಗೆ ನಾಮವನ್ನು ಕೊರೆಯುವ ಮೂಲಕ ಧಾರ್ಮಿಕ ಸಂಪ್ರದಾಯವನ್ನು ಆಚರಿಸಲಾಯಿತು.

ದಿನವಿಡೀ ಭಕ್ತರ ದಟ್ಟಣೆ ಕಂಡುಬAದಿದ್ದು, ಯಾವುದೇ ಅಡಚಣೆ ಉಂಟಾಗದAತೆ ದೇವಾಲಯದ ಆಡಳಿತ ಮಂಡಳಿ ಹಾಗೂ ಸ್ವಯಂಸೇವಕರು ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರು. ಭಕ್ತರು ಭಜನೆ, ಕೀರ್ತನೆಗಳಲ್ಲಿ ಪಾಲ್ಗೊಂಡು ವಿಠ್ಠಲನ ನಾಮಸ್ಮರಣೆ ಮಾಡುತ್ತಾ ಆಷಾಢ ಏಕಾದಶಿಯನ್ನು ಭಕ್ತಿಭಾವದಿಂದ ಆಚರಿಸಿದರು.