Home ಜಿಲ್ಲೆ ರಾಜ್ಯ ಮಟ್ಟದ ರಾಜ್ಯೋತ್ಸವ ರತ್ನ’ ಪ್ರಶಸ್ತಿಗೆ ವಾರ್ತಾ ಇಲಾಖೆಯ ಅಶೀಷ ಹಜಾರೆ ಆಯ್ಕೆ

ರಾಜ್ಯ ಮಟ್ಟದ ರಾಜ್ಯೋತ್ಸವ ರತ್ನ’ ಪ್ರಶಸ್ತಿಗೆ ವಾರ್ತಾ ಇಲಾಖೆಯ ಅಶೀಷ ಹಜಾರೆ ಆಯ್ಕೆ

ಬೀದರ: ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ‘ಕರ್ನಾಟಕ ರಾಜ್ಯೋತ್ಸವ ರತ್ನ ರಾಜ್ಯ ಪ್ರಶಸ್ತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಅಶೀಷ ಕುಮಾರ ಹಜಾರೆ ಅವರು ಆಯ್ಕೆಯಾಗಿದ್ದಾರೆ ಎಂದು ವಿಶ್ವ ಕನ್ನಡಿಗರ ಸಂಸ್ಥೆಯ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾ. ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.
71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸರ್ಕಾರಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಆಶೀಷ್ ಹಜಾರೆ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರಧಾನವು 2026ರ ನವೆಂಬರ್ ಕೊನೆಯ ವಾರದಲ್ಲಿ ಆಯೋಜಿಸಲಾಗುವ ‘ಗಡಿ ಕನ್ನಡಿಗರ ಉತ್ಸವ ಹಾಗೂ 71ನೇ ಕರ್ನಾಟಕ ರಾಜ್ಯೋತ್ಸವ’ ರಾಜ್ಯ ಮಟ್ಟದ ಸಮಾರಂಭದಲ್ಲಿ ಆಶೀಷ ಕುಮಾರ ಹಜಾರೆ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಶೀಷ ಕುಮಾರ ಹಜಾರೆ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ವಿಷಯ ತಿಳಿದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.