Home ಮುಖಪುಟ ಸುದ್ದಿ ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ

ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ


ಬೆಂಗಳೂರು ಏ. ೨೮ – ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವ ಸ್ವಾರ್ಥಿಗಳು ನಾಡಿನ ಸಿಎಂ ಆಗಲು ಹೊರಟಿರುವುದು ಕರ್ನಾಟಕದ ದುರಂತ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ ‘ಡೈವರ್ಶನ್ ಪಾಲಿಟಿಕ್ಸ್’ ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ! ಇಂದು ಮಂಗಳೂರು ಸ್ಫೋಟದ ರೂವಾರಿ ಉಗ್ರ ತಾರೀಕಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿರುವುದನ್ನ ಉಲ್ಲೇಖಿಸಿ ಹೇಳಿದ್ದಾರೆ.


ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, ಎನ್ ಐ ಎ ನ್ಯಾಯಾಲಯ ಆತನಿಗೆ ೧೦ ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರದಲ್ಲೂ ಕೇವಲ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣ ಮಾಡುವ ರಾಜ್ಯ ಕಾಂಗ್ರೆಸ್‌ನದ ನೈಜ ಮುಖವಾಡ ಕಳಚಿದೆ. ಎಂದು ತಿಳಿಸಿದ್ದಾರೆ.

ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನ ಬಿಡಬೇಕು ಎಂದು ಆರ್ ಅಶೋಕ್ ಹೇಳಿದ್ದಾರೆ.