
ಕಲಬುರಗಿ,ಜೂ.8-ಪೆÇೀಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬದಿಂದ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕಾನ್ಸ್‍ಟೇಬಲ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ (ಎಎಸ್‍ಐ) ಲೋಕಾಯುಕ್ತ ಪೆÇಲೀಸರ ಬಲೆಗೆ ಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಸ್ಟೇಷನ್ ಬಜಾರ್ ಪೆÇಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾನ್ಸ್‍ಟೇಬಲ್ ಜ್ಯೋತಿ ಮತ್ತು ಎಎಸ್‍ಐ ಶಿವಶರಣಪ್ಪ ಅವರು ಸಂತ್ರಸ್ತರಿಂದ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ನಗರದ ಬಡ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬಜಾರ್ ಪೆÇಲೀಸ್ ಠಾಣೆಯಲ್ಲಿ ಪೆÇೀಕ್ಸೊ ಕಾಯ್ದೆಯಡಿ
ಪ್ರಕರಣ ದಾಖಲಾಗಿತ್ತು. ಪ್ರಕರಣದ ದೋಷಾರೋಪಣಾ ಪಟ್ಟಿ (ಚಾರ್ಜ್‍ಶೀಟ್) ಸಿದ್ಧಪಡಿಸುವ ಹಂತದಲ್ಲಿ, “ಪ್ರಕರಣವನ್ನು ನಿಮ್ಮ ಪರವಾಗಿ ನೋಡಿಕೊಳ್ಳುತ್ತೇವೆ” ಎಂದು ಹೇಳಿ ಸಂತ್ರಸ್ತೆಯ ಪೆÇೀಷಕರಿಂದ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ.
ಲೋಕಾಯುಕ್ತ ಎಸ್.ಪಿ.ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.






















