
ಮುಂಬೈ, ಆ.19- ಸೆಪ್ಟಂಬರ್ 9ರಿಂದ ಪ್ರಾರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.ಶುಭಮನ್ ಗಿಲ್ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಈ ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಹಾಗೂ ಯಶಸ್ವಿ ಜೈಸ್ವಾಲ್ ಅವಕಾಶ ನೀಡಿಲ್ಲ.
ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದ್ದರೆ, ಗಾಯಾಳು ರಿಷಭ್ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
ಆರಂಭಿಕರಾಗಿ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡರೆ, ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಹಾಗೆಯೇ ಬೌಲರ್ಗಳಾಗಿ ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ.
ತಂಡ ಇಂತಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
ಭಾರತದ ಪಂದ್ಯಗಳು
ಸೆಪ್ಟೆಂಬರ್ 10: ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಸೆಪ್ಟೆಂಬರ್ 10 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2025 ರಲ್ಲಿ ಶುಭಾರಂಭ ಮಾಡುವ ನಿರೀಕ್ಷೆಯಿದೆ.
ಸೆಪ್ಟೆಂಬರ್14: ಟೀಮ್ ಇಂಡಿಯಾದ ಎರಡನೇ ಎದುರಾಳಿ ಪಾಕಿಸ್ತಾನ್. ಇಂಡೋ-ಪಾಕ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಸೆಪ್ಟೆಂಬರ್ 14 ರಂದು ಜರುಗಲಿದೆ.
ಸೆಪ್ಟೆಂಬರ್ 19: ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ. ಸೆಪ್ಟೆಂಬರ್ 19 ರಂದು ಜರುಗಲಿರುವ ಈ ಮ್ಯಾಚ್ನಲ್ಲೂ ಟೀಮ್ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ. ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು 2 ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ