
ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನ ಸಂಕೀರ್ಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಎಟಿಎಂನಲ್ಲಿ 23.86 ಲಕ್ಷ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೆÇಲೀಸರು, ಹರಿಯಾಣ ಮತ್ತು ರಾಜಸ್ಥಾನ ಮೂಲದ ನಾಲ್ವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 12 ಲಕ್ಷ ನಗದು, 20 ಲಕ್ಷ ಮೌಲ್ಯದ ಕ್ರೆಟಾ ಕಾರು ಸೇರಿದಂತೆ ಒಟ್ಟು 32 ಲಕ್ಷ ಮೌಲ್ಯದ ಸ್ವತ್ತು ಹಾಗೂ ಕೃತ್ಯಕ್ಕೆ ಬಳಸಿದ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.
ತನಿಖೆಯ ಸಂದರ್ಭದಲ್ಲಿ ಸಿಸಿಟಿವಿ ಹಾಗೂ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೆÇಲೀಸರು, ಆರೋಪಿಗಳು ತೆಲಂಗಾಣದ ಹೈದರಾಬಾದ್ ಕಡೆಗೆ ತೆರಳಿರುವ ಸುಳಿವು ಪತ್ತೆಹಚ್ಚಿದ್ದರು.
ಈ ಹಿನ್ನೆಲೆಯಲ್ಲಿ ಹೈದರಾಬಾದ್ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವಿಶೇಷ ತಂಡಗಳು ಅಕ್ಟೋಬರ್ 30ರಂದು ಮಧ್ಯಾಹ್ನ 3.30ರ ಸುಮಾರಿಗೆ ಶಾಹೀನ್ನಗರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದವು.
ಪೆÇಲೀಸರ ಪ್ರಕಾರ, ವಿಚಾರಣೆಯ ವೇಳೆ ಆರೋಪಿಗಳು ಭಾಲ್ಕಿಯ ಎಟಿಎಂ ಹಣ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ.
ನಾಲ್ಕು ವಿಶೇಷ ತಂಡಗಳ ಕಾರ್ಯಾಚರಣೆ: ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ, ಬೀದರ್ ಡಿವೈಎಸ್ಪಿ ಡಿ.ಎಚ್. ಮುಲ್ಲಾ ಹಾಗೂ ಸೆನ್ ಪೆÇಲೀಸ್ ಠಾಣೆಯ ಡಿವೈಎಸ್ಪಿ ಎಸ್.ಎನ್. ಸನದಿ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು.
ಭಾಲ್ಕಿ ನಗರ ಠಾಣೆಯ ಪಿಐ ಅಮರೇಶ ಬಿ., ಕಮಲನಗರ ಸಿಪಿಐ ಶ್ರೀಕಾಂತ ಅಲ್ಲಾಪುರೇ, ಭಾಲ್ಕಿ ಗ್ರಾಮೀಣ ಸಿಪಿಐ ಹಣಮರಡ್ಡೆಪ್ಪ, ಮೇಹಕರ ಠಾಣೆಯ ಪಿಎಸ್ಐ ಸುದರ್ಶನರೆಡ್ಡಿ, ಭಾಲ್ಕಿ ಗ್ರಾಮೀಣ ಠಾಣೆಯ ಪಿಎಸ್ಐ ಪ್ರಭಾಕರ ಪಾಟೀಲ ಹಾಗೂ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಕರಣ ಸಂಭವಿಸಿದ ಕೆಲವೇ ದಿನಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ, 32 ಲಕ್ಷ ಮೌಲ್ಯದ ಸ್ವತ್ತು ಜಪ್ತಿ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಶ್ಲಾಘಿಸಿದ್ದಾರೆ.























