
ಕಲಬುರಗಿ,ಮಾ.27-ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿರುವ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟನೂರ (ಡಿ) ಗ್ರಾಮದ ಎ.ಟಿ.ರಾಜು ಎಂಬುವವರ ಮೇಲೆಯೇ ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾವುದೋ ಕೆಲಸದ ನಿಮತ್ಯ ಎ.ಟಿ.ರಾಜು ಅವರು ವಿದ್ಯಾನಗರಕ್ಕೆ ಆಗಮಿಸಿದ್ದಾಗ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದ್ದು, ಹಲ್ಲೆಗೆ ಕಾರಣ ತಿಳಿದುಬಂದಿಲ್ಲ.
ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.



























