
ಔರಾದ್ : ಅ.21:ಔರಾದ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಸರ್ಕಾರ ನಿರ್ಣಯ ಕೈಗೊಂಡ ಪ್ರಯುಕ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರನ್ನು ಔರಾದ ಕಾಂಗ್ರೆಸ್ ಕಾರ್ಯಕರ್ತರ ನಿಯೋಗ ಸನ್ಮಾನಿಸಿ ಗೌರವಿಸಿದರು.
ಬೆಂಗಳೂರಿನ ಅವರ ಕಚೇರಿಗೆ ತೆರಳಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಧನ್ಯವಾದ ತಿಳಿಸಿ ಗೌರವಿಸಿದರು. ಔರಾದ ಮಹಾ ಜನತೆಯ ದಶಕಗಳ ಕನಸು ತಮ್ಮ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ, ಜನಪರ ಹಾಗೂ ಅಭಿವೃದ್ಧಿಪರ ವಾಗಿರುವ ಸರ್ಕಾರ ಜನಸ್ನೇಹಿಯಾಗಿದೆ, ದಶಕಗಳ ಕಾಲ ನೆನೆಗುದಿಗೆ ಬಿದ್ದಿದ್ದ ಪುರಸಭೆಯ ಕನಸು ತಮ್ಮ ಸರ್ಕಾರ ಇಲ್ಲಿನ ಜನತೆಯ ಮನವಿಗೆ ಸ್ಪಂದಿಸಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿದ್ದು ಔರಾದ ಜನತೆಯ ಕನಸು ಈಡೇರಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ ಶಿಂಧೆ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸದಸ್ಯ ಸುನೀಲಕುಮಾರ ದೇಶಮುಖ, ಪ್ರಶಾಂತ ಫುಲಾರಿ, ಸಾಲೋಮನ ಮಹಿಮಾಕರ್, ಸುನೀಲ ಮಿತ್ರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.