
ವಿಜಯಪುರ, ಜೂ. 21: ನಗರದ ಬಂಜಾರ ಕ್ರಾಸ್ ಸಮೀಪ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ ವಿಲಾಸ ನಡುವಿನಮನಿ (30) ಎಂದು ಗುರುತಿಸಲಾಗಿದೆ. ಕುಟುಂಬದ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ ಅವರು ಬಂಜಾರ ಕ್ರಾಸ್ ಪ್ರದೇಶದಲ್ಲಿ ಇದ್ದ ವೇಳೆ ದುಷ್ಕರ್ಮಿಗಳ ದಾಳಿಗೆ ಗುರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವಿಲಾಸ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹ ಕಂಡು ಆಕ್ರಂದನ ಮುಗಿಲು ಮುಟ್ಟಿತು. ಪತ್ನಿ, ಪೆÇೀಷಕರು ಹಾಗೂ ಸಂಬಂಧಿಕರ ರೋದನ ಸ್ಥಳದಲ್ಲಿದ್ದವರ ಮನಕಲಕುವಂತಿತ್ತು.
ಘಟನೆಯ ಮಾಹಿತಿ ಪಡೆದ ಪೆÇಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.
ಹತ್ಯೆಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ವೈಯಕ್ತಿಕ ದ್ವೇಷ, ಹಳೆಯ ವೈಷಮ್ಯ ಅಥವಾ ಇತರೆ ಕಾರಣಗಳ ಹಿನ್ನೆಲೆಯಲ್ಲಿ ಪೆÇಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.
ಈ ಘಟನೆ ವಿಜಯಪುರ ನಗರದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.


























