Home ಮುಖಪುಟ ಸುದ್ದಿ ಆಟೋ ಚಾಲಕನ ಕೊಚ್ಚಿ ಕೊಲೆ

ಆಟೋ ಚಾಲಕನ ಕೊಚ್ಚಿ ಕೊಲೆ

ಬೆಂಗಳೂರು,ಮಾ.೨೨-ಗಲಾಟೆ,ಬೆದರಿಕೆ ಸೇರಿ ಹಲವು ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆಟೋ ಚಾಲಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಮಾಡಿರುವ ದುರ್ಘಟನೆ ಇಂದು ಮುಂಜಾನೆ ರಾಮಮೂರ್ತಿನಗರದ ಟಿಸಿಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ.


ಕೆಆರ್ ಪುರಂನ ಆಟೋ ಚಾಲಕ ಕಿರಣ್ (೨೫)ಕೊಲೆಯಾದವರು, ಮುಂಜಾನೆ ೪:೩೦ರ ವೇಳೆ ಆಟೋದಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯಲ್ಲೇ ಕಿರಣ್ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.


ಹಲ್ಲೆಯಿಂದ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.? ಅಪರಾಧ ಹಿನ್ನೆಲೆ ಹೊಂದಿದ್ದ ಕಿರಣ್ ವಿರುದ್ಧ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.


ಕುಡಿದು ಗಲಾಟೆ ಮಾಡುತ್ತಿದ್ದ ಪ್ರಕರಣಗಳೇ ಹೆಚ್ಚಾಗಿದ್ದು, ನಿನ್ನೆ ರಾತ್ರಿಯೂ ಕೂಡ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿತ್ತು.


ಗಲಾಟೆಯಿಂದ ಆಕ್ರೋಶಗೊಂಡ ಎದುರಾಳಿಗಳು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ರಾಮಮೂರ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.


ಕಿರಣ್ ಕೊಲೆಗೈದು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ೨ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ವಿಕ್ರಂ ಅಮಟೆ ತಿಳಿಸಿದ್ದಾರೆ.