Home ಜಿಲ್ಲೆ ಕಲಬುರಗಿ ಆಟೋ ಚಾಲಕನ ಕೊಲೆ

ಆಟೋ ಚಾಲಕನ ಕೊಲೆ

ಕಲಬುರಗಿ,ಜೂ.24-ಆಟೋ ಚಾಲಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ.
ರಾಯಿಸ್ ಶಹಾ ಕೊಲೆಯಾದವರು. ಆಮ್ಲೆಟ್ ಗಾಗಿ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದೆ ಎನ್ನಲಾಗಿದೆ. ಸುದ್ದಿ ತಿಳಿದು ಚೌಕ್ ಠಾಣೆ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.