
ಜೇವರ್ಗಿ: ಗದಗ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಶ್ರೀ ಷಣ್ಮುಖ ಶಿವಯೋಗಿ ಸ್ಮಾರಕ ಆಂದೋಲಾ ಡಾ. ಸಂಗನಗೌಡ ಪೆÇಲೀಸ್ ಪಾಟೀಲ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜೇವರ್ಗಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗುವ ವಿವಿಧ ಕ್ರೀಡಾಕೂಟಗಳು, ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನ, ಗಣರಾಜ್ಯೋತ್ಸವ ಸಮಾರಂಭ, 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ, ಭಾರತ ಸೇವಾದಳ ಸೇರಿದಂತೆ ವಿವಿಧ ರಾಷ್ಟ್ರೀಯ ಹಬ್ಬ ಹಾಗೂ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹಲವು ಬಾರಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಶಿಸ್ತು, ಸಮಯಪಾಲನೆ, ಉತ್ತಮ ಪಥಸಂಚಲನ ಹಾಗೂ ಕ್ರೀಡಾ ಪ್ರತಿಭೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಶಾಲೆಯ ಮುಖ್ಯ ಗುರುಗಳ ಕೊಠಡಿಯಲ್ಲಿ ವಿದ್ಯಾರ್ಥಿಗಳು ಗಳಿಸಿರುವ ಪ್ರಶಸ್ತಿ, ಪಾರಿತೋಷಕ ಹಾಗೂ ಪ್ರಮಾಣಪತ್ರಗಳ ಮಹಾಪುರವೇ ಕಂಡುಬರುತ್ತಿದೆ.
ಶಾಲೆಯ ಈ ಗಮನಾರ್ಹ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳ ಪಾಲಕರು ಹಾಗೂ ಪೆÇೀಷಕರು ಶಾಲೆಯ ಮುಖ್ಯ ಗುರುಗಳಾದ ಶ್ರೀ ಜಗನ್ನಾಥ ಇಮ್ಮಣ್ಣಿ ಅವರನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಿಗೆ ಸಮರ್ಪಕವಾಗಿ ಸಿದ್ಧಪಡಿಸುವಲ್ಲಿ ಶ್ರಮಿಸಿದ ಸಹಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರ ಕಾರ್ಯವನ್ನೂ ಪಾಲಕರು ಹಾಗೂ ಪೆÇೀಷಕರು ಪ್ರಶಂಸಿಸಿದ್ದಾರೆ.
ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದಕ್ಕೆ ವಿದ್ಯಾಪೀಠದ ಉಪಾಧ್ಯಕ್ಷರಾದ ಶ್ರೀ ಶಿವನಗೌಡ ಪಾಟೀಲ ಹಂಗರಗಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಉತ್ತಮ ಸಾಧನೆಗೆ ಪ್ರೇರಣೆ ನೀಡುತ್ತಿರುವ ಮುಖ್ಯ ಗುರುಗಳು ಹಾಗೂ ಶಿಕ್ಷಕರ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.
ಅದೇ ರೀತಿ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳಾದ ಶ್ರೀ ಎಸ್.ಎಸ್. ಪಟ್ಟಣಶೆಟ್ಟರ್ ಅವರು ಸಂಸ್ಥೆಯ ಶಾಲೆಯ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಮುಖ್ಯ ಗುರುಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರ ಪರಿಶ್ರಮವನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳ ಸವಾರ್ಂಗೀಣ ಅಭಿವೃದ್ಧಿಗೆ ಶಾಲೆಯು ನೀಡುತ್ತಿರುವ ಪೆÇ್ರೀತ್ಸಾಹ ಇದೇ ರೀತಿ ಮುಂದುವರಿಯಲಿ ಎಂದು ಅವರು ಆಶಿಸಿದ್ದಾರೆ.
ಶಾಲೆಯ ನಿರಂತರ ಸಾಧನೆಗೆ ವಿದ್ಯಾರ್ಥಿಗಳ ಪ್ರತಿಭೆ, ಶಿಕ್ಷಕರ ಮಾರ್ಗದರ್ಶನ, ಸಿಬ್ಬಂದಿಯ ಸಹಕಾರ ಹಾಗೂ ಪಾಲಕರ ಪೆÇ್ರೀತ್ಸಾಹವೇ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

































