
ಬೀದರ್, ಜು. 10: ತಾಲೂಕು ಪಂಚಾಯತ್ ಬೀದರ್ ಹಾಗೂ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಮಾಳೆಗಾಂವ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತ್ ಹಾಗೂ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‍ಐಆರ್) ಜಾಗೃತಿ ಅಭಿಯಾನವನ್ನು ಮಾಳೆಗಾಂವ ಡಿಜಿಟಲ್ ಗ್ರಂಥಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್‍ರಾವ್ ಪಾಟೀಲ್ ಹಾಗೂ ನರೇಗಾ ಸಹಾಯಕ ನಿರ್ದೇಶಕಿ ಲಕ್ಷ್ಮಿ ಬಿರಾದರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಣಿಕ್‍ರಾವ್ ಪಾಟೀಲ್, ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‍ಐಆರ್) ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು. ಶಾಲಾ ವಿದ್ಯಾರ್ಥಿಗಳು ತಮ್ಮ ಪೆÇೀಷಕರು ಹಾಗೂ ನೆರೆಹೊರೆಯವರಿಗೆ ಎಸ್‍ಐಆರ್ ನೋಂದಣಿ ಕುರಿತು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ನರೇಗಾ ಸಹಾಯಕ ನಿರ್ದೇಶಕಿ ಲಕ್ಷ್ಮಿ ಬಿರಾದರ್ ಅವರು ವಿಬಿ ರಾಮ್‍ಜಿ ಕಾಯ್ದೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಳೆಗಾಂವ ವತಿಯಿಂದ ಸ್ಥಳೀಯ ಸರ್ಕಾರದ ಆಡಳಿತ, ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣ, ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಕುರಿತು ಗುರುನಾನಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಕ್ಷೇತ್ರಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಹಾಗೂ ಚಳ್ಕಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವೇಂದ್ರ ಅವರು ಪಂಚಾಯತ್ ರಾಜ್ ವ್ಯವಸ್ಥೆ, ಗ್ರಾಮ ಪಂಚಾಯಿತಿ ಆಡಳಿತ, ವಿಬಿ ರಾಮ್‍ಜಿ, ಜಲ್ ಜೀವನ್ ಮಿಷನ್ (ಜೆಜೆಎಂ), ವಸತಿ ಯೋಜನೆ, ಎಸ್‍ಐಆರ್ ನೋಂದಣಿ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಗ್ರಾಮ ಆಡಳಿತ ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಾಳೆಗಾಂವ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸೋಮಶೇಖರ್ ಮಡಿಕಿ, ಐಇಸಿ ಸಂಯೋಜಕ ಸತ್ಯಜೀತ್ ನೀಡೋದಕರ್, ಗುರುನಾನಕ್ ಶಾಲೆಯ ಮುಖ್ಯ ಶಿಕ್ಷಕರು, ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.































