Home ಜಿಲ್ಲೆ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಪೋಷಕರ ಅರಿವು ಕಾರ್ಯಕ್ರಮ

ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಪೋಷಕರ ಅರಿವು ಕಾರ್ಯಕ್ರಮ

ರಾಯಚೂರು,ಅ.೩-ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ, ಇquiಃeiಟಿg ಈouಟಿಜಚಿಣioಟಿ ವತಿಯಿಂದ ನಗರದ ಮಾಣಿಕಪ್ರಭು ಅಂಧ ಮಕ್ಕಳ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಮಸ್ತ ಸಿಬ್ಬಂದಿಯ ಸಹಕಾರದೊಂದಿಗೆ ಪೋಷಕರ ಅರಿವು ಮತ್ತು ಸಂವೇದನಾ ಸಭೆಯನ್ನು ಅಕ್ಟೋಬರ್ ೨ರಂದು ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಪೋಷಕರು ಸಕ್ರಿಯವಾಗಿ ಭಾಗವಹಿಸಿದ್ದರು. ದೃಷ್ಟಿದೋಷ ಹೊಂದಿರುವ ಮಕ್ಕಳ ಸಾಮರ್ಥ್ಯ, ಆತ್ಮವಿಶ್ವಾಸ, ಸ್ವಾವಲಂಬನೆ ಹಾಗೂ ಭವಿಷ್ಯದ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮತ್ತು ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಂತೋಷಕುಮಾರ್ ಅವರು ಸಭೆಯ ಪರಿಚಯ, ಪೋಷಕರ ಪಾತ್ರ ಮತ್ತು ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡಿದರು. ಮಕ್ಕಳ ಸ್ವಾವಲಂಬನೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಪೋಷಕರು ನೀಡಬೇಕಾದ ಬೆಂಬಲದ ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ಪೋಷಕರಿಗಾಗಿ ಃಟiಟಿಜಜಿoಟಜ ಂಛಿಣiviಣಥಿ ನಡೆಸಿ, ದೃಷ್ಟಿಯಿಲ್ಲದೆ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಎದುರಾಗಬಹುದಾದ ಕೆಲವು ಸವಾಲುಗಳನ್ನು ಅನುಭವಿಸುವ ಅವಕಾಶ ಕಲ್ಪಿಸಲಾಯಿತು.
ಡಾ.ಶಿವಕುಮಾರ್ ಅವರು ಪೋಷಕರ ಬೆಂಬಲದ ಮಹತ್ವವನ್ನು ವಿವರಿಸಿ, ದೃಷ್ಟಿದೋಷ ಹೊಂದಿದ್ದರೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಃಟiಟಿಜ ಂಛಿhieveಡಿs ಕುರಿತು PPಖಿ ಮೂಲಕ ಮಾಹಿತಿ ನೀಡಿದರು. ಪ್ರೇರಣಾದಾಯಕ ವಿಡಿಯೋಗಳು ಹಾಗೂ ಡಾ. ಅನಂತ ಅವರ ಜೀವನಗಾಥೆಯನ್ನು ಪ್ರದರ್ಶಿಸುವ ಮೂಲಕ ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ, ಅವರಿಗೆ ಸೂಕ್ತ ಅವಕಾಶ, ತರಬೇತಿ ಮತ್ತು ಪ್ರೋತ್ಸಾಹ ನೀಡುವ ಅಗತ್ಯವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ರಾಚಪ್ಪ ಎಂ. ಯತ್ನಳ್ಳಿ, ಸುನಿಲ್ ಕುಮಾರ್ ದೇಶಪಾಂಡೆ, ಪಾರ್ವತಿ, ರೇಣುಕಾ, ಕುಮಾರಿ ನಾಗಮಣಿ, ಮಲ್ಲಯ್ಯ ಹಾಗೂ ಮಾಣಿಕಪ್ರಭು ಅಂಧ ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದರು.
ಪೋಷಕರು ತಮ್ಮ ಅನುಭವಗಳನ್ನು ಹಂಚಿಕೊAಡು, ಮಕ್ಕಳ ಶಿಕ್ಷಣ, ಸ್ವಾವಲಂಬನೆ, ದಿನನಿತ್ಯದ ಜೀವನ ಕೌಶಲ್ಯಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ಚರ್ಚಿಸಿದರು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ, ಶಿಸ್ತು, ಸೇವಾ ಮನೋಭಾವ ಮತ್ತು ಮೌಲ್ಯಗಳನ್ನು ಸ್ಮರಿಸುತ್ತಾ, ಮಕ್ಕಳಲ್ಲಿ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಉತ್ತಮ ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಕುಟುಂಬ, ಶಾಲೆ ಮತ್ತು ಸಮಾಜದ ಸಹಕಾರದ ಮಹತ್ವವನ್ನು ಕಾರ್ಯಕ್ರಮದಲ್ಲಿ ಒತ್ತಿಹೇಳಲಾಯಿತು.
“ಮಕ್ಕಳಿಗೆ ಎಲ್ಲವನ್ನೂ ಮಾಡಿಕೊಡುವುದಕ್ಕಿಂತ, ಅವರು ತಾವೇ ಮಾಡಲು ಕಲಿಯುವಂತೆ ಅವಕಾಶ ನೀಡುವುದು ಮತ್ತು ಅಗತ್ಯವಿದ್ದಾಗ ಸೂಕ್ತ ಬೆಂಬಲ ನೀಡುವುದು ಮುಖ್ಯ.” ಎಂಬ ಸಂದೇಶವನ್ನು ಪೋಷಕರಿಗೆ ನೀಡಲಾಯಿತು.