ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ


ರೋಣ,ಜು.೩: ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ರೋಣ ತಾಲೂಕಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಗುರಿಯೊಂದಿಗೆ ಶಿಕ್ಷಣ ಇಲಾಖೆಯ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ರೂಪರೇಶವನ್ನು ಸಿದ್ದಪಡಿಸಿದ್ದು ಜುಲೈ ತಿಂಗಳನಿAದ ಬಹುತೇಕ ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮ ಆರಂಭ ಮಾಡಲಾಗುತ್ತಿದೆ.


ಈ ಕುರಿತು ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾಹಿತಿ ನೀಡಿದ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಮಾಹಿತಿ ನೀಡಿದರು.
ಈ ಕಾರ್ಯಕ್ರಮವು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಬಗ್ಗೆ ಹಾಗು ಸರಕಾರ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು, ವಿದ್ಯಾರ್ಥಿಗಳನ್ನು ಆತ್ಮವಿಶ್ವಾಸದಿಂದ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುವಂತೆ ಪ್ರೇರೇಪಿಸುವುದು ಮತ್ತು ತರಗತಿಯಿಂದ ಹೊರಗುಳಿಯುವುದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಈ ಕಾರ್ಯಕ್ರಮ ಸಿದ್ದಪಡಿಸಿದೆ ಎಂದರು..