
ಕಲಬುರಗಿ,ಅ.30-ನಗರದ ಜಿಮ್ಸ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರ ಕೊಠಡಿಯಲ್ಲಿ ಜಾಗೃತಿ ಅರಿವು ಸಪ್ತಾಹ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕರಾದ ಡಾ.ರೂಕೀಯ ಆಸ್ನಾ ರಬಾ ಅವರ ನೇತೃತ್ವದಲ್ಲಿ ಜಿಮ್ಸ್ ಆಸ್ಪತ್ರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಲಾಯಿತು.
ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ, ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ, ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ, ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ, ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗಿರುತ್ತೇನೆ, ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಮಲ್ಲಪ್ಪ ಪ್ರಮಾಣ ವಚನ ವಾಚಿಸಿದರು
ಈ ಕಾರ್ಯಕ್ರಮದಲ್ಲಿ ಪ್ರಮುಖರಾದ. ಓ ಪಿ ಡಿ ಸರ್ಜನ್ ಡಾ.ಶಾಲನಿ ಸಜ್ಜನಶೆಟ್ಟಿ, ಸ್ಥಳೀಯ ವೈದ್ಯಾಧಿಕಾರಿಗಳಾದ ಡಾ.ಜಯಮ್ಮ ಎಸ್ ಗಣಜಲ್ ಖೇಡ್, ಡಾ.ಸಂತೋಷ ಕಟ್ಟಿಮನಿ, ಕಚೇರಿ ಸಹಾಯಕ ಆಡಳಿತ ಅಧಿಕಾರಿ ಅಂಬಾರಾಯ ಸಂಕಾ, ಪ್ರಥಮ ದರ್ಜೆ ಸಹಾಯಕಿ ಕಾವ್ಯ ಅಂಜುಟಗಿ, ಶೀಬಾ ರಾಣಿ, ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಸೈಕಾಲಜಿಸ್ಟ್ ಕೌನ್ಸಿಲರ್ ಮಂಜುನಾಥ ಕಂಬಾಳಿಮಠ, ಗಣಕ ಸಹಾಯಕಿರಾದ ಪಾರ್ವತಿ ಭೀಮರಾವ್, ಸುರೇಖಾ ದಿವmಗಿ,ಶರಣು, ಅವಿನಾಶ್ ಪಾಟೀಲ, ಶರಣು, ಪೃಥ್ವಿ, ಮರಿಗೆಯ್ಯ ಶಾಕಿ ಹಾಗೂ ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.























