Home ಜಿಲ್ಲೆ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಬಿ.ವಿ.ಭೂಮರಡ್ಡಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಜಯಭೇರಿ

ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಬಿ.ವಿ.ಭೂಮರಡ್ಡಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಜಯಭೇರಿ

ಬೀದರ: ಕರ್ನಾಟಕ ಸರ್ಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ, ಎನ್.ಎಸ್.ಎಸ್. ಘಟಕಗಳು ಮತ್ತು ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ೨೦೨೬-೨೭ ಕಾರ್ಯಕ್ರಮದಲ್ಲಿ ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯ ಬಿ.ಎಸ್ಸಿ.೩ನೇ ಸೆಮಿಸ್ಟರ ವಿದ್ಯಾರ್ಥಿನಿ ಕು: ಶ್ರೇಯಾ ಎಸ್. ಮಠಪತಿ ಇವರು ಕವಿತೆ ಬರೆಯುವುದರಲ್ಲಿ ಪ್ರಥಮ ಬಹುಮಾನ ಹಾಗೂ ಬಿ.ಎ-೩ ಸೆಮಿಸ್ಟರಿನ ವಿದ್ಯಾರ್ಥಿನಿಯಾದ ಕು. ಮನುಪ್ರಿಯಾ ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದು ಈ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರ ಸಾಧನೆಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಕಲಬುರಗಿ (ಬೀದರ) ಹಾಗೂ ಬಿ.ವಿ.ಬಿ. ಶಾಲಾ ಕಾಲೇಜು ಆವರಣದ ಸಂಚಾಲಕರಾದ ಡಾ. ರಜನೀಶ್ ಎಸ್.ವಾಲಿಯವರು, ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೀಪಾ ರಾಗ, ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜಕರಾದ ಡಾ. ಶಿವಲೀಲಾ ವೀರಯ್ಯಾ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.