ಕಲಬುರಗಿ,ಸೆ.22-ಜಿಲ್ಲೆಯ ಕಮಲಾಪುರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಪಾಟೀಲ ಮತ್ತು ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಜಗನ್ನಾಥ ರೆಡ್ಡಿ ಅವರು ಬಬಲಾದ ಐಕೆ ಕೂಸಿನ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ನಂತರ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಲಾಯಿತು.. ಹಾಗೆಯೇ ಬಬಲಾದ ಐಕೆ ಗ್ರಾಮ ಪಂಚಾಯಿತಿ ಕಟ್ಟಡ, ಗ್ರಂಥಾಲಯ ವೀಕ್ಷಣೆ ಮಾಡಿ ದಾಖಲಾತಿಗಳ ಪರಿಶೀಲನೆ ಮಾಡಿದರು.
ಸ್ಥಳದಲ್ಲಿ ಗ್ರಾಮ ಅಭಿವೃದ್ಧಿ ಅಧಿಕಾರಿ ಭೀಮರಾವ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಾರ್ವತಿ ಜಗನ್ನಾಥ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.























