Home ಜಿಲ್ಲೆ ಡಿ. ಸುಧಾಕರ್ ನಿಧನಕ್ಕೆ ಬಾಬುರಾವ್ ಚಿಂಚನಸೂರ್ ಸಂತಾಪ

ಡಿ. ಸುಧಾಕರ್ ನಿಧನಕ್ಕೆ ಬಾಬುರಾವ್ ಚಿಂಚನಸೂರ್ ಸಂತಾಪ

ಯಾದಗಿರಿ:ಮೇ.೧೧: ಕರ್ನಾಟಕ ವಿಧಾನಸಭೆಯ ಹಿರಿಯ ಸದಸ್ಯರು ಹಾಗೂ ರಾಜ್ಯದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಆ Suಜhಚಿಞಚಿಡಿ ಅವರ ನಿಧನಕ್ಕೆ ಮಾಜಿ ಸಚಿವ ಬಾಬುರಾವ ಚಿಂಚನಸೂರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಡಿ. ಸುಧಾಕರ್ ಅವರು ನಾಲ್ಕು ಬಾರಿ ವಿಧಾನಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಸಮಾಜ ಕಲ್ಯಾಣ ಸಚಿವರಾಗಿ ಸೇರಿದಂತೆ ಹಲವು ಮಹತ್ವದ ಹುದ್ದೆಗಳನ್ನು ಅಲಂಕರಿಸಿದ್ದರು ಎಂದು ಸ್ಮರಿಸಿದರು. ಸರಳ ವ್ಯಕ್ತಿತ್ವ, ಜನಪರ ಚಿಂತನೆ ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ಅವರು ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು ಎಂದು ಹೇಳಿದರು.
ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ತರಲು ಅವರು ಹೋರಾಟ ನಡೆಸಿದ್ದು, ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸದಾ ಬದ್ಧರಾಗಿದ್ದರು. ಭಾರತ ಜೋಡೋ ಯಾತ್ರೆ ವೇಳೆ ಐದು ದಿನಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಅವರ ಸಂಘಟನಾ ಸಾಮರ್ಥ್ಯ ಗಮನಾರ್ಹವಾಗಿತ್ತು ಎಂದು ಬಣ್ಣಿಸಿದರು.
ಅವರ ಅಗಲಿಕೆ ರಾಜ್ಯಕ್ಕೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ ಬಾಬುರಾವ್ ಚಿಂಚನಸೂರ್, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರು, ಬಂಧುಗಳು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದರು.