Home ಜಿಲ್ಲೆ ಜಮಖಂಡಿಯಲ್ಲಿ ಮೂರು ಜಿಲ್ಲೆಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ಕ್ರೀಡಾಪಟುಗಳ ಭಾಗಿ

ಜಮಖಂಡಿಯಲ್ಲಿ ಮೂರು ಜಿಲ್ಲೆಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ಕ್ರೀಡಾಪಟುಗಳ ಭಾಗಿ

ಜಮಖಂಡಿ:ನಗರದ ತಾಲೂಕು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಕ್ರೀಡಾಪಟುಗಳನ್ನು ಒಳಗೊಂಡ ಮೂರು ಜಿಲ್ಲೆಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ ನೀಡಲಾಯಿತು.
ಪಂದ್ಯಾವಳಿಗೆ ಚಾಲನೆ ನೀಡಿ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೊಂಡ ಮಾತನಾಡಿ, ಆರೋಗ್ಯವಂತ ಜೀವನಕ್ಕೆ ಕ್ರೀಡೆ ಅತ್ಯಂತ ಮಹತ್ವದ್ದಾಗಿದೆ. ಕ್ರೀಡೆಗೆ ಹೆಚ್ಚಿನ ಪೆÇ್ರೀತ್ಸಾಹ ನೀಡಿದಾಗ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಆತ್ಮವಿಶ್ವಾಸ ಪಡೆಯುತ್ತಾರೆ ಎಂದರು.
ಜಮಖಂಡಿಯಲ್ಲಿ ನಡೆಯುತ್ತಿರುವ ಇಂತಹ ಕ್ರೀಡಾಕೂಟಗಳು ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುತ್ತಿವೆ. ಪ್ರಸ್ತುತ ಮೂರು ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು, ರಾಜ್ಯದ ವಿವಿಧ ಭಾಗಗಳು ಹಾಗೂ ಹೊರರಾಜ್ಯಗಳ ಕ್ರೀಡಾಪಟುಗಳು ಭಾಗವಹಿಸುವಂತಹ ದೊಡ್ಡ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸುವ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.
ಇಂತಹ ಕ್ರೀಡಾಕೂಟಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು. ಸ್ಪರ್ಧೆಯ ಮಟ್ಟ ಹೆಚ್ಚಿದಂತೆ ಕ್ರೀಡಾಪಟುಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಹೀಗಾಗಿ ದೊಡ್ಡ ಗುರಿ ಹಾಗೂ ಕನಸುಗಳನ್ನು ಇಟ್ಟುಕೊಂಡು ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಅನೀಲ ಬಡಗೇರ ಮಾತನಾಡಿ, ಬ್ಯಾಡ್ಮಿಂಟನ್ ಅತ್ಯಂತ ಚುರುಕುತನ ಹಾಗೂ ದೈಹಿಕ ಕ್ಷಮತೆಯನ್ನು ಬೇಡುವ ಕ್ರೀಡೆಯಾಗಿದೆ. ಜಮಖಂಡಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದೆ. ತಾಲೂಕು ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕ್ರೀಡಾ ಚಟುವಟಿಕೆಗಳು ನಿರಂತರವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು. ಜಮಖಂಡಿಯಲ್ಲಿ ಕಳೆದ ಮೂರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದ್ದು, ಕ್ರೀಡೆಯೊಂದಿಗೆ ಸಾಮಾಜಿಕ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ. ಇಂತಹ ಪಂದ್ಯಾವಳಿಗಳು ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿವೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ದೊರೆಯುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿಭೆಗಳಿಗೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವಕಾಶಗಳು ಲಭಿಸುತ್ತಿವೆ. ಜಮಖಂಡಿಯಲ್ಲಿ ಆಯೋಜಿಸಿರುವ ಈ ಪಂದ್ಯಾವಳಿಯ ಮೂಲಕ ಸ್ಥಳೀಯ ಹಾಗೂ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ದೊರೆತಿದೆ. ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಶುಭ ಹಾರೈಸಿದರು.
ಪಂದ್ಯಾವಳಿಯಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ವಿವಿಧ ತಂಡಗಳ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡಿದ್ದು, ಹಲವು ರೋಚಕ ಪಂದ್ಯಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ಜಮಖಂಡಿ ಶಟಲ್ ಬ್ಯಾಡ್ಮಿಂಟನ್ ಸ್ಪೋಟ್ರ್ಸ್ ಇನ್‍ಸ್ಟಿಟ್ಯೂಟ್ ಅಧ್ಯಕ್ಷ ಡಾ. ಮಹಾಂತೇಶ ಮಠಪತಿ, ಉಪಾಧ್ಯಕ್ಷ ಮಂಜುನಾಥ ದೋಡಮನಿ, ಸದಸ್ಯರು ಉಪಸ್ಥಿತರಿದ್ದರು.
ಡಾ. ಎನ್.ವ್ಹಿ. ಅಸ್ಕಿ ಕಾರ್ಯಕ್ರಮ ನಿರೂಪಣೆ ಹಾಗೂ ವಂದನಾರ್ಪಣೆ ನೆರವೇರಿಸಿದರು. ಖಜಾಂಚಿ ಶ್ರೀಧರ ಕೊನ್ನೂರ ಸ್ವಾಗತಿಸಿದರು.