Home ಜಿಲ್ಲೆ ಡಿಜೆ, ಬೇಸ್ ಬೂಸ್ಟರ್ ಹಾಗೂ ಹೆಚ್ಚಿನ ಶಬ್ದ ಸಾಧನಗಳ ಬಳಕೆಗೆ ನಿಷೇಧ

ಡಿಜೆ, ಬೇಸ್ ಬೂಸ್ಟರ್ ಹಾಗೂ ಹೆಚ್ಚಿನ ಶಬ್ದ ಸಾಧನಗಳ ಬಳಕೆಗೆ ನಿಷೇಧ

ಗದಗ,ಸೆ೯: ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಹಾಗೂ ಜನಸಾಮಾನ್ಯರ ನೆಮ್ಮದಿಯ ಹಿತದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬೇಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಹಾಗೂ ೭೫ ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಗಳು) ನಿಯಮಗಳು, ೨೦೦೦ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಃಓSS), ೨೦೨೩ರ ಕಲಂ ೧೬೩ರಡಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶ ಜಾರಿಗೊಳಿಸಲಾಗಿದೆ.

ವಸತಿ ಪ್ರದೇಶಗಳು, ಸೈಲೆಂಟ್ ಝೋನ್‌ಗಳಾದ ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳ ೧೦೦ ಮೀಟರ್ ವ್ಯಾಪ್ತಿ, ಇಳಿವು ರಸ್ತೆಗಳು, ಸಂಚಾರ ದಟ್ಟಣೆ ಪ್ರದೇಶಗಳು ಹಾಗೂ ಇತರೆ ಸೂಕ್ಷö್ಮ ಪ್ರದೇಶಗಳಲ್ಲಿ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ ರಾತ್ರಿ ೧೦ ಗಂಟೆಯಿAದ ಬೆಳಗ್ಗೆ ೬ ಗಂಟೆಯವರೆಗೆ ಡಿಜೆ ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದೇಶವನ್ನು ಉಲ್ಲಂಘಿಸುವ ಯಾವುದೇ ಪ್ರಕರಣ ಕಂಡುಬAದಲ್ಲಿ ಸಂಬAಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಕ್ರಮ ಅಥವಾ ಮೆರವಣಿಗೆಯನ್ನು ತಕ್ಷಣವೇ ಸ್ಥಗಿತಗೊಳಿಸುವುದು, ಡಿಜೆ ಹಾಗೂ ಶಬ್ದವರ್ಧಕ ಉಪಕರಣಗಳನ್ನು ಜಪ್ತಿ ಮಾಡುವುದು, ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಹಾಗೂ ಗುಂಪನ್ನು ಚದುರಿಸುವ ಕ್ರಮ ಕೈಗೊಳ್ಳಬಹುದಾಗಿದೆ.

ಇದರೊಂದಿಗೆ, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ಪ್ರಕರಣ ದಾಖಲಿಸುವುದು ಹಾಗೂ ನೀಡಲಾಗಿರುವ ಅನುಮತಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಸಂಬAಧಿಸಿದ ಅಧಿಕಾರಿಗಳಿಗೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಹೆಚ್ಚಿನ ಶಬ್ದ ವ್ಯವಸ್ಥೆ ಬಳಸುವ ಅಗತ್ಯವಿದ್ದಲ್ಲಿ, ಪೂರ್ವ ಲಿಖಿತ ಅನುಮತಿ ಪಡೆದು, ನಿಗದಿತ ಶಬ್ದಮಿತಿಯೊಳಗಿನ ವ್ಯವಸ್ಥೆಯನ್ನು ಮಾತ್ರ ಬಳಸಬೇಕು. ಶಬ್ದ ಮಾಲಿನ್ಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಆಯೋಜಕರು ಲಿಖಿತ ಮುಚ್ಚಳಿಕೆ ಪತ್ರ ನೀಡಬೇಕು.

ಆದೇಶದ ಯಾವುದೇ ಉಲ್ಲಂಘನೆ ಸಂಭವಿಸಿದಲ್ಲಿ ಅದರ ಸಂಪೂರ್ಣ ಹೊಣೆಗಾರಿಕೆಯನ್ನು ಕಾರ್ಯಕ್ರಮದ ಆಯೋಜಕರೇ ವೈಯಕ್ತಿಕವಾಗಿ ವಹಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.