ಸಂಜೆವಾಣಿ ವಾರ್ತೆ
ವಿಜಯಪುರ, ಸೆ.೧೦:ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು ಸಂಘದ ರಾಜ್ಯ ಘಟಕದ ವತಿಯಿಂದ ರವಿವಾರ ನಗರದಲ್ಲಿ ಸಭೆ ನಡೆಯಿತು.
ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೊಡಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದ ಜ್ಞಾನ ಯೋಗಾಶ್ರಮ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಮಾತನಾಡಿ, ಸಮಾಜದ ಸಂಘಟನೆಗಳು ಸಾಮಾಜಿಕವಾಗಿ ನೊಂದವರ ಮನಗಳಿಗೆ ನಂದಾದೀಪವಾಗಿ ಕಾರ್ಯಮಾಡಬೇಕು ಎಂದು ತಿಳಿಸಿದರು. ವಿವಿಧ ಸಂಘ ಸಂಸ್ಥೆಗಳು ಶಿಕ್ಷಣ ನೀಡುವುದಲ್ಲದೆ ಮತ್ತು ಅನ್ನದಾಸೋಹ ವಿವಿಧ ಸಾಮಾಜಿಕ ಕಾರ್ಯಗಳು ನಮ್ಮ ನಾಡಿನಲ್ಲಿ ಮಾಡುತ್ತಿರುತ್ತವೆ ಎಂದು ಆಶೀರ್ವಚನ ನೀಡಿದರು.
ಉಪಾಧ್ಯಕ್ಷ ಅಂದಪ್ಪ ಜವಳಿ ಸಂಘದ ಬೆಳವಣಿಗೆ ಅನೇಕ ವಿಚಾರಗಳನ್ನು ಮನವರಿಕೆ ಮಾಡಿಕೊಟ್ಟರು.
ವಿವಿಧ ಸಂಘದ ಬದಲಾವಣೆಯ ವಿಚಾರಗಳನ್ನು ರಾಜ್ಯಾದ್ಯಂತ ಇರುವ ಜಿಲ್ಲೆ ಹಾಗೂ ತಾಲೂಕ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು.























