Home ಮುಖಪುಟ ಸುದ್ದಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ; ರಸ್ತೆ ತಡೆ, ಪ್ರತಿಭಟನಾಕಾರರು ವಶಕ್ಕೆ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ; ರಸ್ತೆ ತಡೆ, ಪ್ರತಿಭಟನಾಕಾರರು ವಶಕ್ಕೆ

ಕಬ್ಬು ಬೆಳೆಗಾರರ ಕಿಚ್ಚು
ಬೆಳಗಾವಿ/ಧಾರವಾಡ, ಅ.೩೧-
ಪ್ರತಿ ಟನ್ ಕಬ್ಬಿಗೆ ೫,೫೦೦ ರೂ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ಇಂದು ನೀಡಿರುವ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಕರ್ನಾಟಕ ಬಂದ್’ ಕರೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಚಿಕ್ಕೋಡಿ ಹಾಗೂ ಅಥಣಿ ತಾಲೂಕು ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದು, ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಬಂದ್ ಬಿಸಿ ತಟ್ಟಿದೆ. ಆದರೆ ಕರ್ನಾಟಕ ದಕ್ಷಿಣ ಭಾಗದಲ್ಲಿ ಕರ್ನಾಟಕ ಬಂದ್‌ಗೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಬೆಳಗಾವಿ,ಚಿಕ್ಕೋಡಿ, ಬಾಗಲಕೋಟೆ, ಗೋಕಾಕ್, ಹುಕ್ಕೇರಿ, ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದಿವೆ. ರಸ್ತೆ ತಡೆದು, ದಾರಿಗೆ ಅಡ್ಡಲಾಗಿ ಮಲಗಿ ಅನ್ನದಾತರು ಆಕ್ರೋಶ ವ್ಯವ್ಯಕ್ತಪಡಿಸಿದ್ದಾರೆ.


ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೋರಾಟ ಬಿರುಸು ಗೊಂಡಿದೆ. ಕೇಂದ್ರ ಬಸ್ ನಿಲ್ದಾಣದಲ್ಲಿ ರಸ್ತೆ ಮೇಲೆ ಮಲಗಿ ರೈತರು ಪ್ರತಿಭಟನೆ ನಡೆಸಿದ್ದು, ಗಂಟೆ ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸಿಟ್ಟು ಪ್ರದರ್ಶಿಸಿದರು.


ಬಸ್?? ಸಂಚಾರ ಸ್ಥಗಿತಕ್ಕೆ ಪ್ರತಿಭಟನಾಕಾರರು ಯತ್ನಿಸಿದ್ದು, ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರಿಂದ ಹೈಡ್ರಾಮಾವೇ ನಡೆಯಿತು. ರೈತರು-ಪೊಲೀಸರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ನಡೆಯಿತು. ಬಳಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಮೂಡಲಗಿ ತಾಲೂಕಿನ ಮುಸಗುಪ್ಪಿ ಬಳಿ ಮಹಾಲಿಂಗಪುರ ಮೂಡಲಗಿ ಸಂಪರ್ಕಿಸುವ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದ್ದರೆ, ಗೋಕಾಕ್-ಹಿಡಕಲ್ ಡ್ಯಾಂ-ಬೆಳಗಾವಿ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲೇ ಅಡುಗೆ ಮಾಡಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಗೋಕಾಕ್ ತಾಲೂಕಿನ ಹಲವೆಡೆ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ. ಹುಕ್ಕೇರಿ ಪಟ್ಟಣದಲ್ಲೂ ರಸ್ತೆ ತಡೆದು ರೈತರು ಹೋರಾಟ ನಡೆಸಿದ್ದು, ಪ್ರತಿಭಟನೆಗೆ ಹುಕ್ಕೇರಿಯ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಬೆಂಬಲ ನೀಡಿದ್ದಾರೆ. ಬಾವನಸೌಂದತ್ತಿ ಗ್ರಾಮದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ, ಅಂಗಡಿ ಮುಂಗಟ್ಟು ಬಂದ್ ಮಾಡಿ ಹೋರಾಟ ನಡೆಸಲಾಗಿದೆ. ಶಿವಶಕ್ತಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿದ್ದ ಕಾರ್ಮಿಕರು, ಸಿಬ್ಬಂದಿಯನ್ನೂ ಪ್ರತಿಭಟನಾಕಾರರು ತಡೆದಿದ್ದಾರೆ. ಅಥಣಿ ಪಟ್ಟವೂ ಸ್ತಬ್ಧವಾಗಿದ್ದು, ಸ್ವಯಂಪ್ರೇರಿತ ವಾಗಿ ಅಂಗಡಿ ಬಂದ್ ಮಾಡಿ ವ್ಯಾಪಾರಸ್ಥರು ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.


ಮುಂಜಾಗೃತಾ ಕ್ರಮವಾಗಿ ಹಲವು ಜಿಲ್ಲಾಡಳಿತಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿರುವ ನಡುವೆಯೂ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಬಸ್??ಗಳನ್ನು ಪ್ರತಿಭಟನಾಕಾರರು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆಗಳೂ ವರದಿಯಾಗಿವೆ.
ರೈತರು ಇಂದು ಬೆಳಿಗ್ಗೆರಸ್ತೆಯಲ್ಲಿ ಠಿಕಾಣಿ ಹೂಡಿರುವ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ
ಆಕ್ರೋಶ ವ್ಯಕ್ತಪಡಿಸಿದರು.


ಗ್ರಾಮೀಣ ಪ್ರದೇಶಗಳಲ್ಲಿ ರೈತರು ರಸ್ತೆಗೆ ಮುಳ್ಳುಕಂಟಿಗಳನ್ನು ಹಾಕಿ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.ರಸ್ತೆಗಳು ಬಂದ್ ಆದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಿದ್ದು, ಬಸ್ ಸಂಚಾರವಿಲ್ಲದೆ ಜನಸಾಮಾನ್ಯರು ಪರದಾಡುವಂತಾಗಿದೆ.


ಬಂದ್‌ಗೆ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ನಿಷೇಧಾಜ್ಞೆ

ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿಗಳ ಬಂದ್??ಗೆ ಕರೆ ನೀಡಿರುವ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ಬಿಎನ್???ಎಸ್ ೧೬೩ರಡಿ ಇಂದು ಬೆಳಗ್ಗೆ ೬ ರಿಂದ ರಾತ್ರಿ ೧೦ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶಿಸಿದ್ದಾರೆ.

ಈ ನಡುವೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್??ನಲ್ಲಿ ರೈತರ ಪ್ರತಿಭಟನೆ ನಡೆದಿದೆ. ಹೆದ್ದಾರಿಗೆ ಅಡ್ಡಲಾಗಿ ಕಲ್ಲು , ಮುಳ್ಳು ಹಾಕಿ, ಟ್ರ್ಯಾಕ್ಟರ್ ನಿಲ್ಲಿಸಿ ಪ್ರತಿಭಟನೆ ನಡೆಸಲಾಗಿದ್ದುಮ ಪ್ರತಿಭಟನಾ ನಿರತರು ಪೋಲಿಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ೧೦ ಪ್ರಮುಖ ಸ್ಥಳಗಳಲ್ಲಿಯೂ ರೈತರಿಂದ ಪ್ರತಿಭಟನೆ, ಹೆದ್ದಾರಿ ತಡೆಗೆ ಸಿದ್ಧತೆ ಹಿನ್ನೆಲೆ ಇಂದು ಬೆಳಗ್ಗೆ ೬ರಿಂದ ರಾತ್ರಿ ೧೦ರ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಟೋಲ್ ಪ್ಲಾಜಾಗಳ ಪ್ರವೇಶ, ನಿರ್ಗಮನ ಮಾರ್ಗ ಬಂದ್ ಮಾಡುವಂತಿಲ್ಲ. ಟೋಲ್ ಸಂಗ್ರಹಣೆ ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಬಾರದು. ಟ್ರ್ಯಾಕ್ಟರ್, ಲಾರಿ ಸೇರಿದಂತೆ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ಮಾಡುವಂತಿಲ್ಲ. ಹೆದ್ದಾರಿಗಳಲ್ಲಿ ಧರಣಿ, ಮೆರವಣಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದಕ್ಕೆ ನಿರ್ಬಂಧವಿರಲಿದೆ.

ಆಂಬುಲೆನ್ಸ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡುವಂತಿಲ್ಲ. ಸಾರ್ವಜನಿಕ ಆಸ್ತಿ ಹಾನಿ, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಡಿಸಿ ಡಾ.ಆನಂದ್ ಕೆ. ಆದೇಶಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿಯೂ ಇದೇ ರೀತಿಯ ಆದೇಶ ಮಾಡಲಾಗಿದೆ