Home ಜಿಲ್ಲೆ ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ

ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ

ಸಂಜೆವಾಣಿ ವಾರ್ತೆ,
ವಿಜಯಪುರ, ಅ.೩: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರೌಢಶಾಲಾ ವಿಭಾಗದಲ್ಲಿ ಸಿಂದಗಿ ತಾಲ್ಲೂಕಿನ ಸುರಗಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರೇಮಾ ಕೆ. ಬಿರಾದಾರ ಪ್ರಥಮ, ವಿಜಯಪುರ ಜಲನಗರ ಸರ್ಕಾರಿ ಪ್ರೌಢಶಾಲೆಯ ರೇಣುಕಾ ಎಂ. ಕೆಸ್ಕಾರ ದ್ವಿತೀಯ ಹಾಗೂ ಕೆರೂಟಗಿಯ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ಸೃಷ್ಟಿ ಬಿರಾದಾರ ತೃತೀಯ ಸ್ಥಾನ ಪಡೆದರು.
ಪದವಿ ಪೂರ್ವ ವಿಭಾಗದಲ್ಲಿ ಮುದ್ದೇಬಿಹಾಳದ ಹಾರ್ವರ್ಡ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಜ್ವಲ ಎನ್. ಹರಿಂದ್ರಾಳ ಪ್ರಥಮ, ವಿಜಯಪುರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೀನಾ ಕೌಸರ್ ಮೂಲಿಮನಿ ದ್ವಿತೀಯ ಸ್ಥಾನ ಪಡೆದರು. ಬಬಲೇಶ್ವರದ ಎಸ್.ಎಸ್. ಪದವಿ ಪೂರ್ವ ಕಾಲೇಜಿನ ಅಮೂಲ್ಯ ದಡ್ಡಿಮನಿ ಹಾಗೂ ಕೂಡಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದಾನೇಶ್ವರಿ ತೆಲಗಿ ತೃತೀಯ ಸ್ಥಾನ ಪಡೆದರು.
ಪದವಿ-ಸ್ನಾತಕೋತ್ತರ ವಿಭಾಗದಲ್ಲಿ ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಡ್ಡಪ್ಪ ಕರೀಕೆ ಪ್ರಥಮ, ಝಳಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಗೀತಾ ಮೇಟಿ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಂ.ಎ. ವಿದ್ಯಾರ್ಥಿನಿ ಸಾವಿತ್ರಿ ಗಿಡ್ಡಪ್ಪಗೋಳ ದ್ವಿತೀಯ ಸ್ಥಾನ ಪಡೆದರು. ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ. ವಿದ್ಯಾರ್ಥಿನಿ ಸ್ಮೀತಾ ದೋಬಾಳೆ ತೃತೀಯ ಸ್ಥಾನ ಪಡೆದರು.
ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಉಪವಿಭಾಗಾಧಿಕಾರಿ ಜುಫಿಶಾನ ಹಕ್, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ವಿಜಯ ಕೃಷ್ಣ, ವೈ. ಭವ್ಯ ಸೇರಿದಂತೆ ಭವನದ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.