ಕಲಬುರಗಿ :ಏ.೧೬: ಹನ್ನೆರಡನೇ ಶತಮಾನದ ಶರಣ ಚಳುವಳಿಯ ಹರಿಕಾರ, ವಿಶ್ವಗುರು ಬಸವಣ್ಣನವರು ಅನುಭವ ಮಂಟಪವನ್ನು ಸ್ಥಾಪಿಸಿ, ಎಲ್ಲರನ್ನು ಒಂದೇ ವೇದಿಕೆಯಡಿಯಲ್ಲಿ ತಂದು ಪರಸ್ಪರ ಚರ್ಚೆಯ ಮೂಲಕ ಸಾಮಾಜಿಕ ಸಮಸ್ಯೆಗೆ ಪರಿಹಾರವನ್ನು ನೀಡುವ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಂದಿ ಹಾಡಿದ ರೂವಾರಿ ಬಸವಣ್ಣನವರಾಗಿದ್ದಾರೆ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ‘ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವ ಜಯಂತಿ ಅಂಗವಾಗಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿತ್ತಿರುವ ಸರಣಿ ಉಪನ್ಯಾಸ ಮಾಲಿಕೆ-೭ರಲ್ಲಿ “ಬಸವಣ್ಣ ಮತ್ತು ಪ್ರಜಾಪ್ರಭುತ್ವ” ವಿಷಯದ ಬಗ್ಗೆ ಅವರು ಮಾತನಾಡಿದರು. ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವದ ಆಶಯಗಳನ್ನು ಅಂದು ಇಂಗ್ಲೆAಡ್‌ನಲ್ಲಿ ಪ್ರಜಾಪ್ರಭುತ್ವ ಉದಯವಾಗುವುದಕ್ಕೂ ಮುನ್ನವೇ ಭಾರತದಲ್ಲಿ ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಬಸವಣ್ಣನವರಾಗಿದ್ದಾರೆ. ಅವರ ವಿಚಾರಧಾರೆಗಳು ಸಾಮಾಜಿಕ, ಧಾರ್ಮಿಕ ಮತ್ತು ಆರ್ಥಿಕ ಸಮಾನತೆಯ ತಳಹದಿಯ ಮೇಲೆ ಪ್ರಜಾಪ್ರಭುತ್ವವನ್ನು ನಿರ್ಮಿಸಿದವು ಎಂದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ, ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಬಿ.ಕಂಟೆಗೋಳ, ಪ್ರಾಚಾರ್ಯೆ ಪ್ರೊ.ನೇಹಾ ಎಚ್.ಕಂಟೆಗೋಳ, ಪ್ರೊ.ಶಿವಲಿಂಗಪ್ಪ ತಳವಾರ ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.