ಬಸವೇಶ್ವರ ಸಮಾಜ ಸೇವಾ ಬಳಗದಿಂದ ಸಂಭ್ರಮದ ೭೦ನೇ ಕರ್ನಾಟಕ ರಾಜ್ಯೋತ್ಸವ

ಕಲಬುರಗಿ: ನ.೩:ನಗರದ ಆಳಂದ ಖಾದ್ರಿ ಚೌಕ್‌ನಲ್ಲಿನ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ‘ತರಬೇತಿ ಸಂಸ್ಥೆ’ಯ ವತಿಯಿಂದ ಶನಿವಾರ ಸಂಭ್ರಮದಿAದ ೭೦ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ್, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖಂಡ ಓಂಕಾರ ವಠಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ ಹಾಗೂ ವಿದ್ಯಾರ್ಥಿಗಳಿದ್ದರು.