
ಮಾಲೂರು.ಮೇ೩೧: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೊಠಡಿಗಳ ಕೊರತೆ ನೀಗಿಸುವ ಮೂಲಕ ಮೂಲಭೂತ ಸೌಲತ್ತುಗಳನ್ನು ಒದಗಿಸಲಾಗಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ನೀಡುತ್ತಿದ್ದಾರೆ. ಕಾಲೇಜಿನಲ್ಲಿ ಸರ್ಕಾರದಿಂದ ೧೧ ಕೋಟಿಗಳಷ್ಟು ಅನುದಾನವನ್ನು ಬಿಡುಗಡೆಗೊಳಿಸಿ ಕಟ್ಟಡಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಬಾರದಂತೆ ಅನುಕೂಲ ಕಲ್ಪಿಸಲಾಗಿದೆ. ಜೊತೆಗೆ ಕಾಲೇಜಿಗೆ ಸಂಪರ್ಕಿಸುವ ಸಂಪರ್ಕಿಸುವ ರಸ್ತೆ ಅಭಿವೃದ್ದಿ ಬಸ್ ನಿಲ್ದಾಣದಿಂದ ಬಸ್ ಸೌಲಭ್ಯ ಸೇರಿದಂತೆ ಮೂಲಭೂತ ಸವಲತ್ತುಗಳನ್ನು ಒದಗಿಸಲಾಗಿದೆ.
ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಶಿಸ್ತು ಸಮಯ ಪ್ರಜ್ಞೆ ಆಸಕ್ತಿ ಉತ್ತಮ ಅವ್ಯಾಸಗಳನ್ನು ಅಳವಡಿಸಿಕೊಂಡು ಏಕಾಗ್ರತೆಯಿಂದ ಗುರಿಸಾಸಲು ಮುಂದಾಗಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಕಾಲೇಜುಗಳು ಸಾಮಾನ್ಯ ಹಾಗೂ ಬಡವರ್ಗದ ಮಕ್ಕಳಿಂದ ಉಳಿದುಕೊಂಡಿದೆ. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿ ಶೈಕ್ಷಣಿಕವಾಗಿ ಪ್ರಗತಿ ಸಾಸಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಸರ್ಕಾರಿ ಕಾಲೇಜುಗಳಲ್ಲಿ ಗುಣಾತ್ಮಕ ಶಿಕ್ಷಣ ಸಿಗುತ್ತಿದ್ದು ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುವಂತಹ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಪ್ರಥಮ ದರ್ಜೆ ಸರ್ಕಾರದಿಂದ ಬಿಎಸ್‌ಸಿ ಹಾಗೂ ಬಿಎಸ್ ಡಬ್ಲ್ಯೂ ಕೋರ್ಸ್ ಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ಪ್ರಾಂಶುಪಾಲರು ನೀಡಿರುವ ಮೂರು ಮನವಿಗಳನ್ನು ಉನ್ನತ ಶಿಕ್ಷಣ ಸಚಿವರ ಬಳಿ ಚರ್ಚಿಸಿ ಕಾಲೇಜಿಗೆ ಅನುಕೂಲ ಕಲ್ಪಿಸಲಾಗುವುದು ಎಂದ ಅವರು ಪಟ್ಟಣದಲ್ಲಿ ಬಡವರ್ಗದ ಜನತೆ ಹಾಗೂ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ವತಿಯಿಂದ ಪಟ್ಟಣದ ಪುರಸಭೆಯ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಆಗಲಿದೆ ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.
ಪಟ್ಟಣದ ಬಿಸಿಎಂ ಇಲಾಖೆಯ ಅಂಬಿಕಾ ಅವರು ತಮ್ಮ ಕರ್ತವ್ಯದ ಜೊತೆಗೆ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಕುಸ್ತಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು. ಅವರ ಸಾಧನೆ ತಾಲೂಕಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಯುವಕ ಯುವಕರಿಗೆ ಮಾದರಿಯಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ. ಲಕ್ಷ್ಮೀನಾರಾಯಣ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವಿ.ಮುನೇಗೌಡ, ಪುರಸಭಾ ಅಧ್ಯಕ್ಷ ವಿಜಯಲಕ್ಷ್ಮಿ, ಸದಸ್ಯರಾದ ಎನ್.ವಿ. ಮುರುಳಿಧರ್, ಮಂಜುನಾಥ್, ಪ್ರಾಂಶುಪಾಲ ಜಿ.ಅಶ್ವಥ್‌ನಾರಾಯಣ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ಆಂಜಿನಪ್ಪ, ಡಾ. ಸೋಮಶೇಖರ್, ಡಾ. ರವೀಂದ್ರನಾಥ್, ಡಿ.ಎನ್ ಶ್ರೀಧರ್. ವಿನುತಾ. ಅನಂತರಾಜು. ಶೈಲಾ. ಅಂಬಿಕಾ. ತನ್ವೀರ್ ಸೇರಿದಂತೆ ಇನ್ನಿತರರು ಹಾಜರಿದ್ದರು.