
ಕೋಲಾರ, ಮಾ, ೨೭- ನವೀನ್ ಕುಮಾರ್, ಗುಲಗಂಜಿ ಗುರ್ಕಿ, ವಕ್ಕಲೇರಿ, ಕೋಲಾರ ತಾಲೂಕು ವಿಕಲಚೇತನ ವಿದ್ಯಾರ್ಥಿಗೆ ಜಿಲ್ಲಾಧಿಕಾರಿಗಳು ಬ್ಯಾಟರಿ ಚಾಲಿತ ತ್ರಿಚಕ್ರ ವಾಹನ ವಿತರಿಸಿದರು.
ಈ ಸಂದರ್ಭದಲ್ಲಿ ಟಿ. ಕೆ. ರಮೇಶ್ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್,ನಾರಾಯಣ ಸ್ವಾಮಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಿರೂಪಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲೆಯ ೬ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ವಿಕಲಚೇತನ ಕಲ್ಯಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.























