ಬಿಡಿಎ ಕಾರ್‍ಯಾಚರಣೆ: ೧೪೦ ಕೋಟಿ ರೂ. ಆಸ್ತಿವಶ

ಬೆಂಗಳೂರು,ಡಿ.೧೧: ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿದ್ದು, ಇಂದು ನಡೆದ ಮಾಳಗಾಲದಲ್ಲಿ ಕಾರ್ಯಾಚರಣೆ ನಡೆಸಿ, ೧೪೦ ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.


ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಭಾವಿ ಗ್ರಾಮದ ಸರ್ವೆ ನಂ. ೧೭ ರಲ್ಲಿ ೨ ಎಕರೆ ೩೦ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣಗಳನ್ನು ತೆರವುಗೊಳಿಸಿ, ಸುಮಾರು ೧೪೦ ಕೋಟಿ ಮೌಲ್ಯದ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.


ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-೧, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.