
ಜಮಖಂಡಿ :ಮಾ.8: ವಿದ್ಯಾರ್ಥಿಗಳು ಕ್ರಮಬದ್ಧವಾಗಿ ಅಧ್ಯಯನ ಮಾಡಿದರೆ ಉತ್ತಮ ಸಾಧನೆ ಮಾಡಬಹುದು. ಜ್ಞಾನವು ಮಾನವನಿಗೆ ಹಿರಿದಾದ ಬಲವಾಗಿದ್ದು ಅದನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಕುಂಬಾರಹಳ್ಳದ ಪಿ.ಎಂ.ಶ್ರೀ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹಸಮ್ಮೇಳನ, ಪಾಲಕ-ಪೆÇೀಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರೆ ಪುಸ್ತಕಗಳನ್ನು ಓದಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಮತ್ತು ಗ್ರಂಥಗಳಲ್ಲಿ ಬರುವ ಜೀವನ ತತ್ವಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಮಖಂಡಿಯ ಓಲೆ ಮಠದ ಶ್ರೀ ಆನಂದ ದೇವರು ಮಾತನಾಡಿ, ಯುವಜನರು ದುಶ್ಚಟಗಳಿಂದ ದೂರವಿದ್ದು ಗುರುಹಿರಿಯರ ಮಾರ್ಗದರ್ಶನದಲ್ಲಿ ಜೀವನ ಕಟ್ಟಿಕೊಳ್ಳಬೇಕು ಎಂದರು. ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಡಿ.ಸಂಖ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಧರೆಪ್ಪ ಮರನೂರ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.
ಈ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ಉತ್ತಮ ಸಾಧನೆಗೈದ ಐಶ್ವರ್ಯಾ ಕುರಣಿ, ತರುಣ ಘಟ್ನಟ್ಟಿ, ಮಧುಮತಿ ಚಿಕ್ಕಲಕಿ ಸೇರಿದಂತೆ ಹಲವು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾಫಲಕ ಮತ್ತು ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಕ್ರೀಡೆ, ಚರ್ಚಾ ಸ್ಪರ್ಧೆ ಹಾಗೂ ಚಿತ್ರಕಲೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನೂ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬಸವರಾಜ್ ಮರನೂರ, ಧರೆಪ್ಪ ಮಂಟೂರ, ರಾಜು ಮಾಳಿ, ರಮೇಶ್ ಮರನೂರ, ಅಜಯ್ ಕಡಪಟ್ಟಿ, ಮಲ್ಲು ದಾನಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಎಸ್‍ಡಿಎಂಸಿ ಅಧ್ಯಕ್ಷ ನಿಂಗಪ್ಪ ತೇರದಾಳ ಅಧ್ಯಕ್ಷತೆ ವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯ ನಾರಾಯಣ ಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ಶಾರದಾ ಮಠ ಹಾಗೂ ಸಂಗಮೇಶ ಉಟಗಿ ನಿರೂಪಿಸಿದರು.
ಚಂದ್ರಕಾಂತ ಪೆÇೀಲೀಸ್ ವಂದಿಸಿದರು.




















