Home ಜಿಲ್ಲೆ “ಬೆಳಗಾವಿ ಬೆಳಕು” ಸಮಾರಂಭ- ಶಾರದಾ ಅಲ್ಪಸಂಖ್ಯಾತ ಶಾಲೆಯ ಪ್ರಜ್ವಲಗೆ ಸನ್ಮಾನ

“ಬೆಳಗಾವಿ ಬೆಳಕು” ಸಮಾರಂಭ- ಶಾರದಾ ಅಲ್ಪಸಂಖ್ಯಾತ ಶಾಲೆಯ ಪ್ರಜ್ವಲಗೆ ಸನ್ಮಾನ

ಅಥಣಿ : ಮೇ.೨೦:ತಾಲೂಕಿನ ಸಪ್ತಸಾಗರ ಗ್ರಾಮದ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಪ್ರಜ್ವಲ ರಾವಸಾಬ ಬಮ್ಮಣ್ಣವರಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಬೆಳಗಾವಿ ಇವರಿಂದ ಸುವರ್ಣ ಸೌಧದಲ್ಲಿ ಹಮ್ಮಿಕೊಂಡಿದ್ದ “ಬೆಳಗಾವಿ ಬೆಳಕು” ಅಭಿನಂದನಾ ಸಮಾರಂಭದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸನ್ಮಾನಿಸಿ ಗೌರವಿಸಿದರು.

ಕು. ಪ್ರಜ್ವಲ ರಾವಸಾಬ ಬಮ್ಮಣ್ಣವರ ಕಳೆದ ಮಾರ್ಚ್ ನಲ್ಲಿ ಜರುಗಿದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. ೯೮.೮೮ ರಷ್ಟು ಅಂಕಗಳನ್ನು ಪಡೆದು ಅಥಣಿ ತಾಲೂಕಿಗೆ ತೃತೀಯ ಹಾಗೂ ಶೇಗುಣಸಿ ಪರೀಕ್ಷಾ ಕೇಂದ್ರಕ್ಕೆ ಮತ್ತು ಶಾಲೆಗೆ ಪ್ರಥಮ” ಸ್ಥಾನ ಪಡೆದುಕೊಂಡಿದ್ದಾನೆ.

ಅಭಿನAದನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಚಿಕ್ಕೋಡಿ ಉಪ ನಿರ್ದೇಶಕ ಸೀತಾರಾಮು ಆರ್ ಎಸ್. ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ ಹಾಗೂ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರುಗಳು ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ನಿರಂತರ ಅಭ್ಯಾಸದ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಬೆಳಗಾವಿ ಉತ್ತರ ಶಾಸಕ ಆಶಿಫ್ ಸೇಠ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೋರಸೆ ಗುಲಾಬರಾವ್ ಹಾಗೂ ಬೆಳಗಾವಿಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಪಾಲಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದು ಸಮಾರಂಭವನ್ನು ಯಶಸ್ವಿಗೊಳಿಸಿದರು.
ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿ ಪರವಾಗಿ ಸಂಸ್ಥೆಯ ಸಂಸ್ಥಾಪಕ ಡಿ.ಬಿ.ನದಾಫ. ಶಿಕ್ಷಕ ವೃಂದ, ಪಾಲಕ ಬಂಧುಗಳು, ಶಾರದಾ ಹಿರಿಯ ವಿದ್ಯಾರ್ಥಿ/ನಿಯರು ಹಾಗೂ ಸಮಸ್ತ ಗ್ರಾಮಸ್ಥರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.