
ಹುಳಿಯಾರು, ಜೂ. ೬- ಹೋಬಳಿಯ ಬೆಳ್ಳಾರ ಜಿ.ಎಚ್.ಪಿ.ಎಸ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ-ಶಿಕ್ಷಕರ ಸಭೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ ಎಸ್. ಮಾತನಾಡಿ, ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು ಮೂಡಬೇಕು. ಪೋಷಕರು ಮತ್ತು ಶಿಕ್ಷಕರ ನಡುವಿನ ಉತ್ತಮ ಬಾಂಧವ್ಯ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ ಎಂದು ಅಭಿಪ್ರಾಯಪಟ್ಟರು.
ಶಾಲೆಯ ಮುಖ್ಯ ಗುರುಗಳಾದ ದ್ರಾಕ್ಷಾಯಿಣಿ ಅವರು ವಿದ್ಯಾರ್ಥಿಗಳನ್ನು ಶಾಲಾ ಆವರಣಕ್ಕೆ ಆತ್ಮೀಯವಾಗಿ ಸ್ವಾಗತಿಸಿ, ಶಾಲೆಯ ಶೈಕ್ಷಣಿಕ ಗುರಿಗಳ ಬಗ್ಗೆ ಮಾಹಿತಿ ನೀಡಿದರು. ಪೋಷಕ-ಶಿಕ್ಷಕರ ಸಭೆಯಲ್ಲಿ ಮಕ್ಕಳ ಕಲಿಕೆ ಮತ್ತು ಶಾಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರಾದ ಈರಯ್ಯ, ರಂಗಯ್ಯ, ಕುಮಾರಯ್ಯ, ಉಪನ್ಯಾಸಕರಾದ ಕರಿಯಪ್ಪ ಸೇರಿದಂತೆ ಶಾಲೆಯ ಸಹಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.


































