Home ಜಿಲ್ಲೆ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದ ಶಿಕ್ಷಕರಿಗೆ ಅತ್ಯುತ್ತಮ ಸಂಶೋಧಕ ಮತ್ತು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಶರಣಬಸವ ವಿಶ್ವವಿದ್ಯಾಲಯದ ಶಿಕ್ಷಕರಿಗೆ ಅತ್ಯುತ್ತಮ ಸಂಶೋಧಕ ಮತ್ತು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಲಬುರಗಿ: ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಪ್ರಥಮ ಪುಣ್ಯಸ್ಮರಣೋತ್ಸವ, ಶಿಕ್ಷಕರ ದಿನಾಚರಣೆ ಹಾಗೂ ಎಂಜಿನಿಯರ್ಸ್ ದಿನಾಚರಣೆಯ ಅಂಗವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಅರ್ಹ ಬೋಧಕ ಸಿಬ್ಬಂದಿಗೆ *ಅತ್ಯುತ್ತಮ ಸಂಶೋಧಕ, ಅತ್ಯುತ್ತಮ ಶಿಕ್ಷಕ, ಅತ್ಯುತ್ತಮ ಪಿಎಚ್.ಡಿ ಮಾರ್ಗದರ್ಶಕ, ಅತ್ಯುತ್ತಮ ಪ್ರಬಂಧ, ಅತ್ಯುತ್ತಮ ಇಂಜಿನಿಯರ್ ಹಾಗೂ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಮುಗುಳಖೋಡ ಜಿಡಗಾ ಮಠದ ಪೀಠಾಧಿಪತಿ ಪೂಜ್ಯ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ವಿಶ್ವವಿದ್ಯಾಲಯದ ಸಭಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕøತರಿಗೆ ಫಲಕ, ಪ್ರಶಂಸಾ ಪತ್ರ ಹಾಗೂ ಶಾಲು ನೀಡಿ ಗೌರವಿಸಿದರು.
ಶರಣಬಸವ ವಿಶ್ವವಿದ್ಯಾಲಯದ ಸಂಶೋಧನಾ ಡೀನ್ ಹಾಗೂ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ಪ್ರಾಧ್ಯಾಪಕರಾದ ಡಾ. ಸುಜಾತಾ ವಿ. ಮಲ್ಲಾಪುರ ಅವರು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಕೊಡುಗೆ, ವೃತ್ತಿಪರ ಶ್ರೇಷ್ಠತೆ, ನವೀನ ಚಿಂತನೆ ಹಾಗೂ ಸಮರ್ಪಿತ ಸೇವೆಯನ್ನು ಗುರುತಿಸಿ “ಅತ್ಯುತ್ತಮ ಇಂಜಿನಿಯರ್ ಪ್ರಶಸ್ತಿ-2026″ಕ್ಕೆ ಭಾಜನರಾದರು.
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ವಿರೂಪಾಕ್ಷಪ್ಪ ಅವರಿಗೆ ಸಂಶೋಧನೆ, ಶೈಕ್ಷಣಿಕ ಶ್ರೇಷ್ಠತೆ, ನಾವೀನ್ಯತೆ ಮತ್ತು ಜ್ಞಾನ ಸೃಷ್ಟಿಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ “ಅತ್ಯುತ್ತಮ ಸಂಶೋಧಕ ಪ್ರಶಸ್ತಿ-2026” ನೀಡಿ ಗೌರವಿಸಲಾಯಿತು.
ಡಾ. ವಿರೂಪಾಕ್ಷಪ್ಪ ಅವರು “ಕಂಪ್ಯೂಟರ್ ನೆರವಿನ ರೋಗನಿರ್ಣಯ ಮತ್ತು ಚರ್ಮರೋಗಗಳ ವರ್ಗೀಕರಣ” ಎಂಬ ವಿಷಯದ ಪಿಎಚ್.ಡಿ ಪ್ರಬಂಧಕ್ಕೆ ಅವರು ನೀಡಿದ ಅತ್ಯುತ್ತಮ ಮಾರ್ಗದರ್ಶನ ಮತ್ತು ಮಾರ್ಗದರ್ಶಕತ್ವವನ್ನು ಗುರುತಿಸಿ ಅವರಿಗೆ “ಅತ್ಯುತ್ತಮ ಪಿಎಚ್.ಡಿ ಮಾರ್ಗದರ್ಶಕ ಪ್ರಶಸ್ತಿ 2026″ನ್ನೂ ಸಹ ಪ್ರದಾನ ಮಾಡಲಾಯಿತು.
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಶಿವಪ್ರಸಾದ ಬಿರಾದಾರ ಅವರು “ವರ್ಗಾವಣೆ ಕಲಿಕಾ ವಿಧಾನಗಳನ್ನು ಬಳಸಿಕೊಂಡು ಆಳವಾದ ಕಲಿಕೆಯ ಆಧಾರದ ಮೇಲೆ ಮೆದುಳಿನ ಗೆಡ್ಡೆಯ ವರ್ಗೀಕರಣ” ಎಂಬ ವಿಷಯದ ಪ್ರಬಂಧಕ್ಕಾಗಿ “ಅತ್ಯುತ್ತಮ ಪ್ರಬಂಧ ಪ್ರಶಸ್ತಿ-2026” ಪಡೆದರು. “ಕಂಪ್ಯೂಟರ್ ನೆರವಿನ ರೋಗನಿರ್ಣಯ ಮತ್ತು ಚರ್ಮರೋಗಗಳ ವರ್ಗೀಕರಣ” ಎಂಬ ವಿಷಯದ ಪ್ರಬಂಧಕ್ಕಾಗಿ ಡಾ. ನಿರುಪಮಾ ಅವರಿಗೂ “ಅತ್ಯುತ್ತಮ ಪ್ರಬಂಧ ಪ್ರಶಸ್ತಿ-2026” ನೀಡಿ ಗೌರವಿಸಲಾಯಿತು. ಕುಮಾರಿ ಸರಸ್ವತಿ ಹಾಗೂ ಕುಮಾರಿ ತನುಶ್ರೀ ಬಿ. ಕಟ್ಟಿಮನಿ ಅವರಿಗೆ “ಅತ್ಯುತ್ತಮ ಯೋಜನೆ ಪ್ರಶಸ್ತಿ-2026” ನೀಡಿ ಗೌರವಿಸಲಾಯಿತು.
ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಸಹ ಪ್ರಾಧ್ಯಾಪಕ ಪೆÇ್ರ. ಶ್ರೀಧರ ಅಣಕಲ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸುನೀತಾ ಬಿ. ಪಾಟೀಲ, ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪೆÇ್ರ. ಉದಯಕುಮಾರ ಬಿ. ಗಡಮಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರಭಾವತಿ ಎಸ್. ಚಿತ್ಕೋಟಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಾಗಭೂಷಣ ರೆಡ್ಡಿ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಡಿಸೈನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪೆÇ್ರ. ಶರಣಬಸಪ್ಪ ವಿ. ಎಚ್. ಅವರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದರು.
ಪೂಜ್ಯ ಅಪ್ಪಾಜಿ ಅವರ ಪ್ರಥಮ ಪುಣ್ಯಸ್ಮರಣೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನೂ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಮಾತನಾಡಿ, ಲಿಂಗೈಕ್ಯ ಪೂಜ್ಯ ಡಾ. ಅಪ್ಪಾಜಿ ಅವರಿಗೆ ಶಿಕ್ಷಕರು ಅತ್ಯಂತ ಪ್ರೀತಿಪಾತ್ರರಾಗಿದ್ದರು. ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಬೋಧನೆಯಲ್ಲಿ ಉತ್ತಮ ಪದ್ಧತಿಗಳನ್ನು ಅಳವಡಿಸಿಕೊಂಡು, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಪ್ರದಾನ ಪದ್ಧತಿಯನ್ನು ಪ್ರತಿವರ್ಷವೂ ಮುಂದುವರಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ “ಜ್ಞಾನ ವಾಹಿನಿ” ನಿಯತಕಾಲಿಕದ ಎರಡನೇ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.