
ಕಲಬುರಗಿ,ಅ.18-ಪಾಳಾದ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಜಿಲ್ಲಾ ಮಟ್ಟದ ಸರ್ವೋತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ “ಅಂತರ್ಮುಖಿ” ಮತ್ತು *”ಹೊಸಮನಿ ಸಿರಿ” ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಅ.19 ರಂದು ಬೆಳಗ್ಗೆ 10.30 ಕ್ಕೆ ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ. ನಮೋಶಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಡಾ.ರುದ್ರಗೌಡ ಬಿರಾದಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಮಗ್ರ ಶಿಕ್ಷಣ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ, ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮೀ ಪಾಟೀಲ ಮಾಕಾ, ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ರಾಜೇಂದ್ರ ಕೊಂಡಾ, ಸರಕಾರಿ ಕಿರಿಯ ತಾಂತ್ರಿಕ ಶಾಲೆ ಪ್ರಾಂಶುಪಾಲ ಡಾ.ಕೆ.ಗಿರಿಮಲ್ಲ ಹಾಗೂ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಡಾ.ಪ್ರಕಾಶ ರಾಠೋಡ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ವಹಿಸಲಿದ್ದಾರೆ.
ಡಾ.ಆನಂದ ಸಿದ್ದಾಮಣಿ ಕಾರ್ಯಕ್ರಮ ನಿರೂಪಿಸಲಿದ್ದು, ವಿಭಾಗೀಯ ಪತ್ರಾಗಾರ ಕಚೇರಿ ಉಪ ನಿರ್ದೇಶಕ ಡಾ.ವೀರಶೆಟ್ಟಿ ಬಿ. ಗಾರಂಪಳ್ಳಿ ಸ್ವಾಗತಿಸಲಿದ್ದಾರೆ.
ಈ ಸಂದರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಶಿಕ್ಷಕ ಪ್ರಶಸ್ತಿಗೆ 16 ಶಿಕ್ಷಕರು, ಜೊತೆಗೆ ಪುಸ್ತಕ ಉದ್ಯಮಿ ಬಸವರಾಜ ಕೊನೇಕ, ಪತ್ರಕರ್ತ ದೇವಯ್ಯ ಗುತ್ತೇದಾರ ಹಾಗೂ ರೈತ ಪ್ರಶಸ್ತಿ ವಿಜೇತ ಮಲ್ಲಿಕಾರ್ಜುನ ಕೊಳ್ಳೂರ ಅವರನ್ನು ಗೌರವಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ತಿಳಿಸಿದ್ದಾರೆ.
ಎಂ.ಎಸ್.ಇರಾಣಿ ಪಿಯು ಕಾಲೇಜಿನ ಉಪನ್ಯಾಸಕ ಈರನಗೌಡ ಕೆ. ಪಾಟೀಲ್, ಮಾಶಾಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಕ ಸೋಮಯ್ಯ ಸಿದ್ದಯ್ಯ ಸ್ವಾಮಿ, ರೇವಗ್ಗಿ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕಿ ಕು.ಲಕ್ಷ್ಮೀ ವೇಲುಸ್ವಾಮಿ, ಆದರ್ಶನಗರದ ಸರ್ಕಾರಿ ಪಿ.ಯು.ಕಾಲೇಜಿನ ಉಪನ್ಯಾಸಕಿ ಲೀಲಾವತಿ ಪಡಶೆಟ್ಟಿ, ಗುಂಜಬಬಲಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ನಿಂಗಪ್ಪ ಮಂಗೊಂಡಿ, ಉಪನ್ಯಾಸಕಿ ಡಾ. ಶುಲಾಬಾಯಿ ಎಚ್. ಕಾಳಮಂದರಗಿ, ಗವನಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯಗುರು ದೇವಪ್ಪ ಹಿಪ್ಪರಗಿ, ಬಟಗೇರಾ (ಬಿ) ಸರಕಾರಿ ಪ್ರೌಢಶಾಲೆ ವೃತ್ತಿ ಶಿಕ್ಷಣ ಶಿಕ್ಷಕ ಶಿವಪ್ರಸಾದ ವಿಶ್ವಕರ್ಮ, ಸೈದಾಪುರ ಉರ್ದು ಕಿರಿಯ ಪ್ರಾಥಮಿಕ ಶಾಲೆ ಅಬ್ದುಲ್ ಸಾಬ್ ಕೊರಬೊ, ಬಾಲಕಿಯರ ಸರಕಾರಿ ಪಿ.ಯು.ಕಾಲೇಜಿನ ಉಪನ್ಯಾಸಕ ಸಂಜೀವಕುಮಾರ ಫಿರಂಗಿ, ಚಿಂಚೋಳಿಯ ಪದ್ಮಾ ಪಿಯು ಕಾಲೇಜಿನ ಪ್ರಾಂಶುಪಾಲ ಸಿದ್ದಣ್ಣ ಬೇನೂರು, ಕಾಳಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗೌಡಪ್ಪಗೌಡ ಮಾಲಿಪಾಟೀಲ, ಸರಕಾರಿ ಉರ್ದು ಪ್ರಾಥಮಿಕ ಶಾಲೆ ಶಿಕ್ಷಕಿ ಶಾಂತಾ ಸಿದ್ದಾಮಣಿ, ಶರಣ ಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ಗೋದುತಾಯಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕಲ್ಪನಾ ಭೀಮಳ್ಳಿ, ಅವರಾದ ಸರಕಾರಿ ಪ್ರೌಢಶಾಲೆ ಶಿಕ್ಷಕಿ ವಿಜಯಲಕ್ಷ್ಮೀ ರಡ್ಡಿ ಅವರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು.