Home ಜಿಲ್ಲೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಭದ್ರೆಶ್ವರ ಮಠದ ಶಿವಕುಮಾರ್ ಸ್ವಾಮೀಜಿ ಖಂಡನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಭದ್ರೆಶ್ವರ ಮಠದ ಶಿವಕುಮಾರ್ ಸ್ವಾಮೀಜಿ ಖಂಡನೆ

ಬೀದರ್:ಮೇ.13: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ತೀವ್ರ ವೈಫಲ್ಯ ಆಗಿರದೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಕನಸಿನ ಮೇಲೆ ದೌರ್ಜನ್ಯವಾಗಿದೆ ಎಸಗಿದ ಎಂದು ಬಾವಗಿ ಭದ್ರೆಶ್ವರ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಟೀಕಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು
ಮಾಫಿಯಾದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ
ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ.ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯ-ವಸ್ಥಿತವಾಗಿ ನಾಶಪಡಿಸುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯವನ್ನೇ ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯಕ್ಕೆ ಬಲಿ ನೀಡಲಾಗುತ್ತಿದೆ. ಶಿಕ್ಷಣ ವ್ಯ-ವಸ್ಥೆಯನ್ನು ಮಾರುಕಟ್ಟೆಯ-ನ್ನಾಗಿ ಮಾಡಿರುವುದರಿಂದ ಇಂತಹ ಸಮಸ್ಯೆಗಳು ಪದೇ ಪದೇ ಮರುಕಳಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಪದೇಪದೇ ವಿಫಲವಾಗಿ ದೇಶದ ನಂಬಿಕೆ ಕಳೆದುಕೊಂಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸ-ಬೇಕು. ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದೆ ಇರುವ ವ್ಯಕ್ತಿಗಳು ಮತ್ತು ಕೋಚಿಂಗ್ ಮಾಫಿಯಾವನ್ನು ಪತ್ತೆ ಮಾಡಬೇಕು. ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಸಂಘಟಿತರಾಗಿ ಹೋರಾಡಬೇಕು ಎಂದು ತಿಳಿಸಿದ್ದಾರೆ.