
ಕಲಬುರಗಿ,ಆ.10-ತಾಲ್ಲೂಕಿನ ಭಾಲಖೇಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಲಕ್ಷ್ಮೀ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮವನ್ನು ಆ.18 ರಂದು ಹಮ್ಮಿಕೊಳ್ಳಲಾಗಿದೆ.
ಹಿರೇಸಾವಳಗಿಯ ಗುರುನಾಥ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯವಹಿಸಲಿದ್ದು, ಬಂಗರಗಾದ ಶಿವಾನಂದ ಶಿವಾಚಾರ್ಯರ ಸಮ್ಮುಖದಲ್ಲಿ ಸಮಾರಂಭ ನಡೆಯಲಿದೆ. ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಲಾಗಿದೆ.






























