
ಬೀದರ್:ಜ.೧೯: ಮಾಜಿ ಸಚಿವ ಭೀಮಣ್ಣ ಖಂಡ್ರೆ ಕಡಕ್ ಲೀಡರ್ ಆಗಿದ್ದರು ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಹೇಳಿದರು.
ನಗರದ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಭೀಮಣ್ಣ ಖಂಡ್ರೆ ಅವರಿಗೆ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
ನೇರ ನಡೆ-ನುಡಿಯ ನೇತಾರರಾಗಿದ್ದರು. ತಮಗೆ ಅನ್ನಿಸಿದ್ದನ್ನು ಯಾವುದೇ ಮುಲಾಜಿಲ್ಲದೆ ಹೇಳುತ್ತಿದ್ದರು. ಸತ್ಯ, ನ್ಯಾಯದ ಪರವಾಗಿ ಹೋರಾಟ ನಡೆಸುತ್ತಿದ್ದರು ಎಂದು ಸ್ಮರಿಸಿದ್ದರು.
ಖಂಡ್ರೆ ಅವರು ಅನೇಕ ಹೋರಾಟಗಳ ನೇತೃತ್ವ ವಹಿಸಿ ಯಶಸ್ಸು ಕಂಡಿದ್ದರು. ಶಾಸಕ, ವಿಧಾನ ಪರಿಷತ್ ಸದಸ್ಯ ಹಾಗೂ ಸಚಿವರಾಗಿ ರಾಜ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು.
ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ, ಖಜಾಂಚಿ ಶಿವರಾಜ ಹುಡೇದ, ಹಿರಿಯ ಸದಸ್ಯರಾದ ಬಿ.ಎಸ್. ಕುದರೆ, ಶಿವಲಿಂಗಪ್ಪ ಜಲಾದೆ, ಆಡಳಿತಾಧಿಕಾರಿ ಸೌಭಾಗ್ಯವತಿ, ಮುಖ್ಯಶಿಕ್ಷಕರಾದ ನೀಲಮ್ಮ ಚಾಮರೆಡ್ಡಿ, ರಾಹುಲ್ ಮೆಟ್ಟೆಕರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

























