
ವಿಜಯಪುರ, ಜೂ. 22: ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೆÇಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೆÇಲೀಸರು ತೆರಳಿದ್ದ ವೇಳೆ ಆತ ಪೆÇಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‍ನ ಬಲಗಾಲಿಗೆ ಗುಂಡು ಹಾರಿಸಿದ್ದು, ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಘಟನೆಯಲ್ಲಿ ಪೆÇಲೀಸ್ ಸಿಬ್ಬಂದಿಗಳಾದ ಶೇಖರ್ ಪವಾರ್ ಹಾಗೂ ವಿಜಯಕುಮಾರ್ ಬನಸೋಡೆ ಗಾಯಗೊಂಡಿದ್ದು, ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಆರೋಪಿ ಮಹೇಶ್ ತಳವಾರನಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಮೇ 29ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಸಮೀಪದ ಜಮೀನಿನಲ್ಲಿ ನಿರಾಳೆ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು.
ಪ್ರಾಥಮಿಕ ತನಿಖೆಯ ಪ್ರಕಾರ, ಹತ್ಯೆ ನಡೆಸಲು ಸುಮಾರು ?15 ಲಕ್ಷ ಸುಪಾರಿ ಪಡೆದಿದ್ದ ಮಹೇಶ್ ತಳವಾರ ತನ್ನ ಸಹಚರರನ್ನು ಸೇರಿಸಿಕೊಂಡು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಸುಮಾರು 23 ದಿನಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಕೊನೆಗೂ ಪೆÇಲೀಸ್ ಬಲೆಗೆ ಬಿದ್ದಿದ್ದಾನೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


























