ಭೂಮಿ ಪೂಜೆ ಕಾರ್ಯಕ್ರಮ

ಧಾರವಾಡ,ಜ2: ಇಲ್ಲಿಯ ಉಡುಪಿ ಓಣಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಕರ್ನಾಟಕ ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಅವರು ಭೂಮಿ ಪೂಜೆ ನೆರವೇರಿಸಿದರು.


ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಂಗನವಾಡಿಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ನಮ್ಮ ಸರ್ಕಾರದ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ” ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾ ದ, ಪ್ರಕಾಶ ಘಾಟಗೆ,ರಾಜಶೇಖರ್ ಕಮತಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ, ಬಸವಂತಪ್ಪ ಮಾಲನವರ, ಬಸವರಾಜ ಸೋಗಿ, ಭಾಸ್ಕರ,ಶಿವಾಜಿ ಘಾಟ ಟಗೆ, ಶೌಕತ ಮುತವಲ್ಲಿ, ನಾರಾಯಣ ಸುಳ್ಳದ, ಅಮೀನ್ ಸಂಗೊಳ್ಳಿ, ಚಂದ್ರು ಕಡಾಡೇ, ಸೇರಿದಂತೆ ಜಿರಲಿ ಪ್ಲಾಟ್, ಉಡುಪಿ ಓಣಿ, ವಾಲ್ಮೀಕಿ ಓಣಿ,ಹಿರಿಯ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.