
ಅಫಜಲಪುರ:ಜ.26: ತಾಲೂಕಿನ ಬಿದನೂರ ಗ್ರಾಮದ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳು ಮುಖಾಮುಖಿಯಾಗಿ ಆಕಸ್ಮಿಕವಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ರವಿವಾರ ಬೆಳಿಗ್ಗೆ ಸುಮಾರು 11 ಗಂಟೆ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಬಸ್ಸಿನಲ್ಲಿ ಇದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ದೇವಲಗಾಣಪುರ ಪೆÇಲೀಸ್ ಠಾಣೆಯ ಪಿಎಸ್‍ಐ ಸಂಗೀತಾ ಶಿಂಧೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಅಪಘಾತಕ್ಕೆ ಬಿದನೂರ ಗ್ರಾಮದ ಬಳಿ ಇರುವ ಇಕ್ಕಟ್ಟಾದ ರಸ್ತೆ ಪ್ರಮುಖ ಕಾರಣ ಎಂದು ಅಫಜಲಪುರ ಸಾರಿಗೆ ಘಟಕ ವ್ಯವಸ್ಥಾಪಕ ಎ.ವಿ.ಭೋವಿ ಅವರು ಮಾಹಿತಿ ನೀಡಿದ್ದಾರೆ. ಇದೇ ಮಾರ್ಗದಲ್ಲಿ ಎದುರುಗಡೆಯಿಂದ ಮತ್ತೊಂದು ಬಸ್ ಬರುತ್ತಿದ್ದ ಹಿನ್ನೆಲೆಯಲ್ಲಿ,ಚಾಲಕರು ರಸ್ತೆ ಬದಿಗೆ ಬಸ್ ತೆಗೆದುಕೊಳ್ಳಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಪೆÇಲೀಸರು ನೀಡಿದ್ದಾರೆ.
























