
ಬೀದರ್:ಫೆ.೧೮:ಒಳಮೀಸಲಾತಿ ಜಾರಿಯಿಂದ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹಾಗೂ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಫೆಬ್ರವರಿ ೨೦ ರಂದು ಮಧ್ಯಾಹ್ನ ೨ ಗಂಟೆಗೆ ನಗರದ ಶಾಹಗಂಜ್‌ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ಬೃಹತ್ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಪ್ರಸ್ತುತ ಒಳಮೀಸಲಾತಿ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯವು ನಮ್ಮ ಮುಂದಿನ ಪೀಳಿಗೆಯ ಮತ್ತು ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಈ ಅನ್ಯಾಯವು ಸಮುದಾಯದ ಪಾಲಿಗೆ ‘ಮರಣ ಶಾಸನ’ವಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟಿತ ಹೋರಾಟದ ಅಗತ್ಯವಿದೆ ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಈ ಗಂಭೀರ ವಿಷಯದ ಕುರಿತು ಚರ್ಚಿಸಲು ಮತ್ತು ಸಲಹೆ ಸೂಚನೆಗಳನ್ನು ನೀಡಲು ಜಿಲ್ಲೆಯ ಬಲಗೈ ಸಮುದಾಯದ ಹೋರಾಟಗಾರರು ಮತ್ತು ಚಿಂತಕರು, ವಿವಿಧ ಸಂಘ-ಸAಸ್ಥೆಗಳ ಮುಖ್ಯಸ್ಥರು, ಸರ್ಕಾರಿ ಹಾಗೂ ಅರೆ-ಸರ್ಕಾರಿ ನೌಕರರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮಹಿಳೆಯರು, ಯುವಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಬೇಕೆAದು ಬಲಗೈ ಸಮುದಾಯದ ಯುವ ಮುಖಂಡ ಶ್ರೀ ಮಹೇಶ್ ಗೋರನಾಳಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ. ಸಮುದಾಯದ ಅಸ್ತಿತ್ವ ಮತ್ತು ಹಕ್ಕಿಗಾಗಿ ನಡೆಯುವ ಈ ಸಭೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಾಲ್ಗೊಳ್ಳುವಂತೆ ಕೋರಲಾಗಿದೆ.



























